ಇಂದು ಅಂಬರೀಷ್ ಪುಣ್ಯತಿಥಿ

Webdunia
ಬುಧವಾರ, 24 ನವೆಂಬರ್ 2021 (11:10 IST)
ಕನ್ನಡದ ಹಿರಿಯ ನಟ ಅಂಬರೀಷ್ ಅವರು 2018ರ ನವೆಂಬರ್ 24ರಂದು ನಿಧನರಾದರು. ಅವರನ್ನು ಕಳೆದುಕೊಂಡು ಮೂರು ವರ್ಷ ಕಳೆದಿದೆ.
ಇಂದು ಅಂಬಿ ಅವರ ಪುಣ್ಯಸ್ಮರಣೆ. ಅಂಬಿ ಇಲ್ಲದೆ ಮೂರು ವರ್ಷ ಕಳೆದು ಹೋಗಿದೆ. ಅವರನ್ನು ಕಳೆದುಕೊಂಡ ನೋವು ಇನ್ನೂ ಕಡಿಮೆ ಆಗಿಲ್ಲ. ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಅಂಬರೀಷ್ ಅವರನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಅಂಬರೀಷ್ ಸಮಾಧಿಗೆ ಇಂದು ಕುಟುಂಬದವರು, ಆಪ್ತರು, ಅಭಿಮಾನಿಗಳು ಭೇಟಿ ನೀಡಲಿದ್ದಾರೆ.
‘ನಾಗರಹಾವು’ (1972) ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು ಅಂಬರೀಷ್. ಹೀರೋ ಆಗಿ, ಖಳ ನಟನಾಗಿ ಮತ್ತು ಪೋಷಕ ಪಾತ್ರದ ಮೂಲಕ ಗುರುತಿಸಿಕೊಂಡರು. ರೆಬೆಲ್ ಸ್ಟಾರ್, ಮಂಡ್ಯದ ಗಂಡು ಎಂಬಿತ್ಯಾದಿ ಹೆಸರುಗಳ ಮೂಲಕ ಗುರುತಿಸಿಕೊಂಡರು ಅವರು. ನವೆಂಬರ್ 24ರಂದು ಅಂಬರೀಷ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 66 ವರ್ಷ ವಯಸ್ಸಾಗಿತ್ತು. ಅವರನ್ನು ಕಳೆದುಕೊಂಡಿದ್ದ ದಿನ ಇಡೀ ಕನ್ನಡ ಚಿತ್ರರಂಗ ದುಃಖದಲ್ಲಿ ಮುಳುಗಿತ್ತು. ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಸಂಸ್ಕಾರ ಮಾಡಲಾಯಿತು. ಈ ವೇಳೆ ಸುದೀಪ್ ಸೇರಿ ಸಾಕಷ್ಟು ಸೆಲೆಬ್ರಿಟಿಗಳು ಆಗಮಿಸಿದ್ದರು. ಅಂಬರೀಷ್ ಅವರನ್ನು ಇಂದು ನೆನಪು ಮಾಡಿಕೊಳ್ಳುವ ಕಾರ್ಯ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಕೈ ಹಿಡಿಯುತ್ತಿದ್ದ ಹಾಗೇ ತನ್ನ ಊರು ವಿದ್ಯಾರ್ಥಿಗಳಿಗೆ ಸರ್ಪ್ರೈಸ್ ಕೊಟ್ಟ ವಿಜಯ್ ದೇವರಕೊಂಡ

ಸತ್ಯನಾರಾಯಣ ಪೂಜೆಯಲ್ಲಿ ವಿಜಯ್‌ನನ್ನೇ ನೋಡುತ್ತಾ ಕುಳಿತ ರಶ್ಮಿಕಾ ಮಂದಣ್ಣ, Video

ತೆಲಂಗಾಣ ಸಿಎಂ ರೇವಂತ್ ರೆಡ್ಡಿಯನ್ನು ಭೇಟಿಯಾದ ರಶ್ಮಿಕಾ ಮಂದಣ್ಣ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಪರ ಪ್ರತಿಭಟನೆಗೆ ಮುಂದಾದ ಕೆಲ ಸಂಘಟನೆಗಳು

ಕೊನೆಗೂ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಟೀಸರ್ ನೋಡಿ ಶಾಕ್ ಆಗಿದ್ದ ಅಭಿಮಾನಿಗಳಿಗೆ ಟ್ರೇಲರ್‌ ಹೇಗಿರುತ್ತೆ

ಮುಂದಿನ ಸುದ್ದಿ
Show comments