Select Your Language

Notifications

webdunia
webdunia
webdunia
webdunia

ನಟ ಅಂಬರೀಶ್ ಇನ್ನಿಲ್ಲ!

ನಟ ಅಂಬರೀಶ್ ಇನ್ನಿಲ್ಲ!
ಬೆಂಗಳೂರು , ಭಾನುವಾರ, 25 ನವೆಂಬರ್ 2018 (06:24 IST)
ಬೆಂಗಳೂರು: ನಟ-ಮಾಜಿ ಸಚಿವ ಅಂಬರೀಶ್  ಶನಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಕಿಡ್ನಿ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅಂಬರೀಶ್ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ.

 
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ  ಅಂಬರೀಶ್  ಅನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ.


ಭಾನುವಾರ ಇಡೀ ದಿನ ಪಾರ್ಥೀವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಇರಿಸಲಾಗುತ್ತಿದೆ. ಅಂತಿಮ‌ ದರ್ಶನಕ್ಕೆ ಆಗಮಿಸಲು ಮಂಡ್ಯ ಜಿಲ್ಲೆಯಿಂದ ವಿಶೇಷ ಸಾರಿಗೆ ಬಸ್ ವ್ಯವಸ್ಥೆಗೊಳಿಸಲಾಗಿದೆ.


ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಅಭಿಮಾನಿಗಳು ಶಾಂತಿ ಕಾಪಾಡಬೇಕು ಎಂದು ಅವರು ಮನವಿ ಮಾಡಿದರು.


ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

'ಸೆಕ್ಸ್ ಇಲ್ಲದೆ ಬದುಕಿರಲು ಸಾಧ್ಯವಿಲ್ಲ ' ಎಂದ ನಟಿ ಸಮಂತಾ ರುತ್ ಪ್ರಭು