Publish Date: Sun, 23 Apr 2023 (07:00 IST)
Updated Date: Sun, 23 Apr 2023 (07:04 IST)
ಚೆನ್ನೈ: ಅಮೃತವರ್ಷಣಿ ಸಿನಿಮಾದಿಂದ ಕನ್ನಡಿಗರಿಗೆ ಚಿರಪರಿಚಿತರಾಗಿರುವ ಬಹುಭಾಷಾ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಕೆಲವು ದಿನಗಳ ಹಿಂದೆ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅದಾದ ಬಳಿಕ ಕೊಂಚ ಚೇತರಿಸಿಕೊಂಡ ಹಿನ್ನಲೆಯಲ್ಲಿ ಡಿಸ್ಚಾರ್ಜ್ ಮಾಡಲಾಗಿತ್ತು.
ಆದರೆ ಈಗ ಮತ್ತೆ ಆರೋಗ್ಯ ಸಮಸ್ಯೆಯಾಗಿದ್ದು, ಹೈದರಾಬಾದ್ ನ ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಅವರನ್ನು ಐಸಿಯುವಿನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗತಿ ಬಗ್ಗೆ ಆಸ್ಪತ್ರೆಯಿಂದ ಅಧಿಕೃತ ಹೇಳಿಕೆ ಬಂದಿಲ್ಲ.