ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಅನಂತ್ ನಾಗ್ ಇಂದು ತಮ್ಮ ಜನ್ಮದಿನವನ್ನು ಉಡುಪಿಯಲ್ಲಿ ಆಚರಿಸಿಕೊಂಡಿದ್ದಾರೆ.
ಉಡುಪಿಯಲ್ಲಿ ಸಿನಿಮಾವೊಂದರ ಶೂಟಿಂಗ್ ಗಾಗಿ ಬಂದಿದ್ದ ಅನಂತ್ ನಾಗ್ ಇಲ್ಲಿನ ಸುಪ್ರಸಿದ್ಧ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.
ಬಳಿಕ ಅದಮಾರು ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಶ್ರೀಗಳು ಅವರನ್ನು ವಿಶೇಷವಾಗಿ ಗೌರವಿಸಿದ್ದಾರೆ. ಈ ವೇಳೆ ಅವರ ಪತ್ನಿ ಗಾಯತ್ರಿ ಕೂಡಾ ಜೊತೆಗಿದ್ದರು.