Webdunia - Bharat's app for daily news and videos

Install App

ವೆಸ್ಟ್‌ಇಂಡೀಸ್‌ ಕ್ರಿಕೆಟಿಗ ರಸೆಲ್ ಜತೆ ಡಾನ್ಸ್‌ ಮಾಡಿದ ಅನನ್ಯಾ ಪಾಂಡೆ

sampriya
ಮಂಗಳವಾರ, 28 ಮೇ 2024 (16:00 IST)
Photo By Instagram
ಚೆನ್ನೈ: ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಿತು. ಈ ಗೆಲುವಿನ ಬಳಿಕ ಕೋಲ್ಕತ್ತ​ ತಂಡ ಪಬ್​ನಲ್ಲಿ ಪಾರ್ಟಿ ಮಾಡಿತ್ತು. ಇದೇ ವೇಳೆ ವೆಸ್ಟ್‌ಇಂಡೀಸ್‌ ಕ್ರಿಕೆಟಿಗ ಆ್ಯಂಡ್ರೆ ರಸೆಲ್ ಅವರು ಬಾಲಿವುಡ್ ನಟಿ ಅನನ್ಯಾ ಪಾಂಡೆ ಜತೆ ಡಾನ್ಸ್‌ ಮಾಡಿದ್ದು, ಆ ವಿಡಿಯೊ ವೈರಲ್ ಆಗಿದೆ.

ಫೈನಲ್‌ ಪಂದ್ಯದ ಬಳಿಕ ಕೆಕೆಆರ್‌ ತಂಡದ ಸಹ ಮಾಲೀಕನೂ ಆಗಿರುವ ಶಾರೂಖ್ ಖಾನ್ ಅಭಿನಯದ ಡಂಕಿ ಚಿತ್ರದ​ ಲುಟ್ ಪಟ್ ಗಯಾ ಹಾಡಿಗೆ ಆ್ಯಂಡ್ರೆ ರಸೆಲ್ ಹೆಜ್ಜೆ ಹಾಕಿದ್ದಾರೆ.  ಅವರಿಗೆ ಅನನ್ಯಾ ಪಾಂಡೆ ಸಾಥ್‌ ನೀಡಿದ್ದಾರೆ.

ಅಲ್ಲದೆ, ಈಚೆಗೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಡಂಕಿ ಚಿತ್ರದ ಲುಟ್ ಪುಟ್ ಗಯಾ ಹಾಡನ್ನು ಅವರು ಗುನುಗಿದ್ದರು. ಈ ವೇಳೆ ರಿಂಕು ಸಿಂಗ್​ ಕೂಡ ರಸೆಲ್​ಗೆ ಸಾಥ್​ ನೀಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

ರಸೆಲ್ ಬಾಲಿವುಡ್​ ನಟಿ ಅವಿಕಾ ಗೋರ್ ಜತೆ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ ವಿಡಿಯೊ ಕೂಡ ಕೆಲವು ದಿನಗಳ ಹಿಂದೆ ವೈರಲ್​ ಆಗಿತ್ತು. ​ಲಡ್ಕಿ ತು ಕಮಲ್ ಕಿ ಎನ್ನುವ ಹಾಡಿಗೆ ರೆಸೆಲ್ ಅವಿಕಾ ಸೇರಿ ಹೆಜ್ಜೆ ಹಾಕಿರುವ ಈ ಹಾಡು ಯೂಟ್ಯೂಬ್​ನಲ್ಲಿ ಮೇ 9 ರಂದು ಬಿಡುಗಡೆಯಾಗಿತ್ತು.

ಚೆನ್ನೈಯ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದಿದ್ದ ಅತ್ಯಂತ ನೀರಸ ಫೈನಲ್​ ಪಂದ್ಯದಲ್ಲಿ ಕೋಲ್ಕತ್ತ ತಂಡವು ಹೈದರಾಬಾದ್‌ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿ ಮೂರನೇ ಬಾರಿ ಪ್ರಶಸ್ತಿ ಗೆದ್ದಿಕೊಂಡಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments