ಬೆಂಗಳೂರು: ಡ್ರಗ್ಸ್ ಕೇಸ್ ಪ್ರಕರಣದಲ್ಲಿ ಆಂಕರ್ ಅನುಶ್ರೀ ಹೆಸರನ್ನು ಮಂಗಳೂರು ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ನಿಂದ ಕೈಬಿಟ್ಟಿರುವ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.
ಅನುಶ್ರೀ ಹೆಸರನ್ನು ಪ್ರಭಾವಿಗಳ ಒತ್ತಡಕ್ಕೆ ಮಣಿದು ಕೈಬಿಟ್ಟಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಗೃಹ ಸಚಿವರು, ಯಾರದ್ದೇ ಒತ್ತಡಕ್ಕೆ ಒಳಗಾಗಿ ಯಾರನ್ನೂ ಆರೋಪ ಮುಕ್ತಗೊಳಿಸುವ ಪ್ರಶ್ನೆಯೇ ಇಲ್ಲ. ಎಷ್ಟೇ ಪ್ರಭಾವಿಗಳಾದರೂ ಪ್ರಕರಣದಲ್ಲಿ ಶಾಮೀಲಾಗಿದ್ದಾರೆಂದು ಸಾಬೀತಾದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಆದರೆ ಮೊದಲು ಚರ್ಜ್ ಶೀಟ್ ನಲ್ಲಿ ಹೆಸರು ಸೇರಿಸಿ ಬಳಿಕ ಅನುಶ್ರೀ ಹೆಸರನ್ನು ಕೈ ಬಿಡಲು ಕೆಲವು ರಾಜಕೀಯ ನಾಯಕರ ಒತ್ತಡ ಕಾರಣ ಎಂಬ ಆರೋಪ ಕೇಳಿಬಂದಿದೆ.