Publish Date: Sat, 29 Jul 2023 (09:20 IST)
Updated Date: Sat, 29 Jul 2023 (09:35 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಖ್ಯಾತಿಯ ಆಂಕರ್ ಚೈತ್ರಾ ವಾಸುದೇವನ್ ವೈಯಕ್ತಿಕ ಜೀವನದಲ್ಲಿ ಬಿರುಗಾಳಿ ಎದ್ದಿದೆ. ಪತಿ ಸತ್ಯ ನಾಯ್ಡು ಅವರಿಂದ ವಿಚ್ಛೇದನ ಪಡೆಯುತ್ತಿರುವುದಾಗಿ ಚೈತ್ರಾ ಸೋಷಿಯಲ್ ಮೀಡಿಯಾದಲ್ಲಿ ಹೇಳಿದ್ದಾರೆ.
ಸಿನಿಮಾ ಸಂಬಂಧಿತ ಕಾರ್ಯಕ್ರಮಗಳಲ್ಲಿ ಚೈತ್ರಾ ನಿರೂಪಣೆ ಇದ್ದೇ ಇರುತ್ತದೆ. ಬಣ್ಣದ ಲೋಕದಲ್ಲಿ ಮಿಂಚುತ್ತಿರುವ ಚೈತ್ರಾ ತಮ್ಮ ವೈಯಕ್ತಿಕ ಜೀವನದ ವಿಚಾರವನ್ನು ತಾವೇ ಖುದ್ದಾಗಿ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.
ಹಲವಾರು ತಿಂಗಳಿನಿಂದ ಸಾಕಷ್ಟು ಯೋಚಿಸಿದ ಬಳಿಕ ನನ್ನ ವಿಚ್ಛೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ಮಾಡುತ್ತಿದ್ದೇನೆ. ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ/ಧ್ವೇಷಿಸಬೇಡಿ ಎಂದು ವಿನಂತಿಸಿಕೊಳ್ಳುತ್ತೇನೆ. ನನ್ನ ಈ ಸ್ಥಿತಿಯಿಂದ ಹೊರಬರಲು ಕಷ್ಟಪಡುತ್ತಿದ್ದೇನೆ. ಕೆಲಸ ಮಾತ್ರ ಜೀವನದಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ನಾನು ಈವೆಂಟ್ ಮತ್ತು ಟಿವಿ ಉದ್ಯಮದಲ್ಲಿ ಕಳೆದ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಇನ್ಮುಂದೆಯು ಮುಂದುವರಿಸಲು ಬಯಸುತ್ತೇನೆ ಮತ್ತು ನಿಮ್ಮಿಂದ ಹೆಚ್ಚು ಪ್ರೀತಿ ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಚೈತ್ರಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅವರ ಈ ಪೋಸ್ಟ್ ಗೆ ಹಲವು ಧೈರ್ಯ ತುಂಬಿ ಕಾಮೆಂಟ್ ಮಾಡಿದ್ದಾರೆ.