ದೊಡ್ಮನೆಯಿಂದ ಅನ್ನಸಂತರ್ಪಣೆ

Webdunia
ಮಂಗಳವಾರ, 9 ನವೆಂಬರ್ 2021 (07:57 IST)
ಸಿನಿಮಾ ಹಾಗೂ ಸಾಮಾಜಿಕ ಕೆಲಸದ ಮೂಲಕ ಜನರ ಮನದಲ್ಲಿ ಅಚ್ಚು ಮೂಡಿಸಿ ಹೋಗಿದ್ದಾರೆ. ಅವರು ಅಗಲಿ ಇಂದಿಗೆ (ಅಕ್ಟೋಬರ್ 9) 12 ದಿನಗಳಾಗಿವೆ.
ಈ ಕಾರಣಕ್ಕೆ ದೊಡ್ಮನೆ ಕುಟುಂಬ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡುತ್ತಿದೆ. ಪುನೀತ್ ರಾಜ್ಕುಮಾರ್ ಹೆಸರಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಅನ್ನಸಂತರ್ಪಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವ ಸಾಧ್ಯತೆ ಇದೆ. ಇದಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ. ಹಾಗಾದರೆ ಈ ಕಾರ್ಯಕ್ರಮ ಹೇಗೆ ನಡೆಯಲಿದೆ? ಆ ಬಗ್ಗೆ ಇಲ್ಲಿದೆ ಮಾಹಿತಿ.  ಇಂದು ಅಭಿಮಾನಿಗಳು, ಗಣ್ಯರಿಗೆ ಅನ್ನಸಂತರ್ಪಣೆ ಆಯೋಜನೆ ಮಾಡಲಾಗಿದೆ. ಎಲ್ಲಾ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಊಟ ಸ್ವೀಕರಿಸಬಹುದು. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ. 2 ಸಾವಿರಕ್ಕೂ ಹೆಚ್ಚು ಚೇರ್, ಊಟದ ಟೇಬಲ್ ಹಾಕಲಾಗಿದೆ. 600ಕ್ಕೂ ಹೆಚ್ಚು ಅಡುಗೆ ಭಟ್ಟರು, ಹೆಲ್ಪರ್ಗಳು ಭಾಗಿಯಾಗುತ್ತಿದ್ದಾರೆ. ಇಂದು ಬೆಳಗ್ಗೆ 11 ಗಂಟೆಯಿಂದ ಅನ್ನಸಂತರ್ಪಣೆ ಪ್ರಾರಂಭವಾಗಲಿದೆ.
20 ಸಾವಿರ ಜನರಿಗೆ ಮಾಂಸಾಹಾರಿ ಊಟದ ವ್ಯವಸ್ಥೆ ಮಾಡಲಾಗಿದೆ. 5 ಸಾವಿರ ಜನರಿಗೆ ಸಸ್ಯಾಹಾರಿ ಊಟಕ್ಕೆ ವ್ಯವಸ್ಥೆ ನಡೆಸಲಾಗುತ್ತಿದೆ. ಒಟ್ಟು 25 ಸಾವಿರ ಜನಕ್ಕೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಊಟದ ಸಂದರ್ಭದಲ್ಲಿ ನೂಕುನುಗ್ಗಲು ಆಗದಿರಲಿ ಎನ್ನುವ ಕಾರಣಕ್ಕೆ ಅರಮನೆ ಮೈದಾನದ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ನೆನೆದು ಇನ್‌ಸ್ಟಾದಲ್ಲಿ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ

ಮಗನಿಗೂ ತನ್ನದೇ ಹಾದಿ ತೋರಿಸಿದ ರಿಷಬ್ ಶೆಟ್ಟಿ: ಮೊದಲ ಬಾರಿಗೆ ಬಣ್ಣ ಹಚ್ಚಿದ ರನ್ವಿತ್ Video

ಯಾರಾದ್ರೆ ನಂಗೇನು ದಾರಿ ಬಿಡಿ.. ಫ್ಯಾನ್ಸ್ ಗೆ ಪೋಸ್ ನೀಡುತ್ತಿದ್ದ ಕಾಜಲ್ ಅಗರ್ವಾಲ್ ಗೆ ಸ್ಕೂಟಿ ಸವಾರ ಮಾಡಿದ್ದೇನು Video

ಮೋದಿ ಫೋಟೋ ಇಟ್ಟು ಪೂಜೆ ಮಾಡ್ತಾಳೆ..ಕೆಎಲ್ ರಾಹುಲ್ ಮಗಳ ಬಗ್ಗೆ ಸುನಿಲ್ ಶೆಟ್ಟಿ ಬಿಚ್ಚಿಟ್ಟ ಅಚ್ಚರಿ ಸಂಗತಿ Video

ನಮ್ಮ ಕಣ್ಣುಗಳು ಇನ್ನೂ ತೇವವಾಗಿವೆ, ಮಗಳ ಮದುವೆ ಬಗ್ಗೆ ಖುಷ್ಮೂ ಬಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments