Publish Date: Sat, 17 Oct 2020 (18:33 IST)
Updated Date: Sat, 17 Oct 2020 (18:35 IST)
ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.
ಸ್ಥಳೀಯ ನ್ಯಾಯಾಲಯದ ಆದೇಶದ ಮೇರೆಗೆ ಮುಂಬೈ ಪೊಲೀಸರು ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೆಲ್ ವಿರುದ್ಧ ವಿವಿಧ ಸಮುದಾಯಗಳ ನಡುವೆ ದ್ವೇಷ ಉತ್ತೇಜಿಸುತ್ತಿದ್ದಾರೆ ಎಂಬ ಆರೋಪದ ಮೇರೆಗೆ ಎಫ್ಐಆರ್ ದಾಖಲಿಸಿದ್ದಾರೆ.
ಬಾಲಿವುಡ್ ಕಾಸ್ಟಿಂಗ್ ನಿರ್ದೇಶಕ ಮತ್ತು ಫಿಟ್ನೆಸ್ ತರಬೇತುದಾರ ಮುನವ್ವಾರ್ ಅಲಿ ಸಯ್ಯದ್ ಅವರು ಈ ಕುರಿತು ದೂರು ಸಲ್ಲಿಸಿದ್ದರು.
ಈ ದೂರಿನ ಬಗ್ಗೆ ತನಿಖೆ ನಡೆಸುವಂತೆ ಬಾಂದ್ರಾ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪೊಲೀಸರಿಗೆ ಆದೇಶಿಸಿದೆ.