ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಸೀಸನ್ 10 ರ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಮತ್ತೊಂದ ಪ್ರಕರಣ ದಾಖಲಾಗಿದೆ.
ಬಿಗ್ ಬಾಸ್ ಶೋ ಸ್ಪರ್ಧಿ ತನಿಷಾ ಮಾತಿನ ನಡುವೆ ವಡ್ಡ ಎಂಬ ಪದ ಬಳಕೆ ಮಾಡಿದ್ದಕ್ಕೆ ಭೋವಿ ಸಮುದಾಯದವರು ಆಕೆಯ ವಿರುದ್ಧ ಮೊದಲು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ದೂರು ದಾಖಲಿಸಿದ್ದರು.
ಇದು ಇಷ್ಟಕ್ಕೇ ನಿಂತಿಲ್ಲ. ಇದೀಗ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂಬಳಗೋಡು ಪೊಲೀಸರು ಬಿಗ್ ಬಾಸ್ ಗೆ ಮನೆಗೆ ತೆರಳಿ ವಿಚಾರಣೆ ನಡೆಸಿದ್ದರು. ಇದೀಗ ಮತ್ತೊಂದು ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ತನಿಷಾಗೆ ಮತ್ತಷ್ಟು ಸಂಕಷ್ಟ ತಂದಿದೆ.