Publish Date: Sun, 10 Sep 2017 (08:09 IST)
Updated Date: Sun, 10 Sep 2017 (08:12 IST)
ಬೆಂಗಳೂರು: ಮೊನ್ನೆಯಷ್ಟೇ ಹಿರಿಯ ನಟ ಸುದರ್ಶನ್ ರನ್ನು ಕಳೆದುಕೊಂಡಿರುವ ಕನ್ನಡ ಚಿತ್ರರಂಗಕ್ಕೆ ಇಂದು ಬೆಳಗ್ಗೆಯೇ ಮತ್ತೊಂದು ಆಘಾತ ಸಿಕ್ಕಿದೆ. ಹಿರಿಯ ನಟಿ ಬಿವಿ ರಾಧಾ ಇಹಲೋಕ ತ್ಯಜಿಸಿದ್ದಾರೆ.
ಗಾಯಕ, ನಿರ್ದೇಶಕ ಕೆಎಸ್ ಎಲ್ ಸ್ವಾಮಿ ಅವರ ಪತ್ನಿಯಾಗಿರುವ ನಟಿ ಬಿವಿ ರಾಧಾಗೆ ನಿನ್ನೆ ರಾತ್ರಿ ಹೃದಯಾಘಾತವಾಗಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಕಲ್ಯಾಣನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಸುಮಾರು 250 ಕ್ಕೂ ಹೆಚ್ಚು ಸಿನಿಮಾ, ಧಾರವಾಹಿಗಳಲ್ಲೂ ನಟಿಸಿದ್ದರು.