Select Your Language

Notifications

webdunia
webdunia
webdunia
webdunia

ದರ್ಶನ್‌ಗೆ ಪೊಲೀಸರಿಂದ ಮತ್ತೊಂದು ಶಾಕ್‌: ಕಮಿಷನರ್‌ ದಯಾನಂದ್‌ ಹೇಳಿದ್ದೇನು

darshan

Sampriya

ಬೆಂಗಳೂರು , ಮಂಗಳವಾರ, 21 ಜನವರಿ 2025 (14:36 IST)
Photo Courtesy X
ಬೆಂಗಳೂರು: ನಟ ದರ್ಶನ್ ಬಳಿ ಇದ್ದ ಗನ್ ಪರವಾನಗಿ ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು  ಬೆಂಗಳೂರು ಪೊಲೀಸ್‌ ಕಮಿಷನರ್‌ ದಯಾನಂದ್‌ ತಿಳಿಸಿದ್ದಾರೆ.

ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್‍ನಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಬಳಿ ಲೈಸೆನ್ಸ್ ಇರುವ ಗನ್ ಇದ್ದರೆ ಅದನ್ನು ಕೂಡಲೇ ವಶಕ್ಕೆ ಪಡೆಯಲಾಗುತ್ತದೆ. ಅಲ್ಲದೇ ಆ ವ್ಯಕ್ತಿಯ ಲೈಸೆನ್ಸ್ ರದ್ದು ಮಾಡಬಹುದಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‍ನಲ್ಲಿ ಲೈಸೆನ್ಸ್ ಗನ್ ಬಳಕೆ ಮಾಡಿರೊದು ಎಲ್ಲಿಯೂ ಕಂಡುಬರದ ಕಾರಣ ತಾತ್ಕಾಲಿಕವಾಗಿ ಅಂದರೆ ಕೇಸ್ ಮುಗಿಯುವತನಕ ಅಮಾನತಿನಲ್ಲಿಡಲು ಪೊಲೀಸರು ನಿರ್ಧರಿಸಿದ್ದಾರೆ.

ದರ್ಶನ್‌ ಅವರಿಗೆ ಪರವಾನಗಿ ರದ್ದು ಮಾಡುವ ಕುರಿತು ಈಗಾಗಲೇ ಪೊಲೀಸರು ನೋಟಿಸ್ ನೀಡಿದ್ದರು. ನೋಟಿಸ್‍ನಲ್ಲಿ, ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ. ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಗನ್ ಇರೋದ್ರಿಂದ ಸಾಕ್ಷಿಗಳನ್ನು ಬೆದರಿಸುವ ಬಗ್ಗೆ ಅನುಮಾನ ಇದೆ. ಆದ್ದರಿಂದ ನಿಮ್ಮ ಲೈಸೆನ್ಸ್ ರದ್ದು ಮಾಡಬೇಕಿದೆ. ಈ ಬಗ್ಗೆ ಒಂದು ವಾರದೊಳಗೆ ಉತ್ತರಿಸಬೇಕು. ನೋಟಿಸ್‍ಗೆ ಉತ್ತರ ನೀಡಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದರು.

ಪೊಲೀಸರ ನೋಟಿಸ್‍ಗೆ ಉತ್ತರಿಸಿದ್ದ ದರ್ಶನ್, ನಾನು ಸೆಲೆಬ್ರಿಟಿ ಆಗಿರುವುದರಿಂದ ಆತ್ಮರಕ್ಷಣೆಗೆ ಗನ್ ಅವಶ್ಯಕತೆ ಇದೆ. ನನ್ನ ಮೇಲಿರೋ ಕೇಸ್‍ನ ಸಮಯದಲ್ಲಿ ಆ ಗನ್ ಬಳಕೆ ಮಾಡಿಲ್ಲ. ಯಾವುದೇ ಕಾರಣಕ್ಕೂ ಗನ್ ದುರ್ಬಳಕೆ ಮಾಡಿಕೊಳ್ಳಲ್ಲ. ಹಾಗಾಗಿ ಗನ್ ಲೈಸೆನ್ಸ್ ಮುಂದುವರೆಸುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಇದೀಗ ಗನ್‌ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನರೇಶ್ ಗೆ ಎನರ್ಜಿ 10 ಜನರ ಎನರ್ಜಿ ಇದೆ, ರಾತ್ರಿ ನಾನೇ ಸುಸ್ತಾಗುತ್ತಾನೆ: ಪವಿತ್ರಾ ಲೋಕೇಶ್ Video