Daily Horoscope
✕

ಕಾಂತಾರ 2 ಆರಂಭಕ್ಕೆ ಮುನ್ನ ದೈವದ ಮೊರೆ ಹೋದ ಚಿತ್ರತಂಡ?

Webdunia
ಮಂಗಳವಾರ, 21 ನವೆಂಬರ್ 2023 (10:20 IST)
ಬೆಂಗಳೂರು: ಕಾಂತಾರ 2 ಸಿನಿಮಾ ಇದೇ ತಿಂಗಳ ಕೊನೆಯಲ್ಲಿ ಆರಂಭವಾಗಲಿದೆ ಎಂಬ ಸುದ್ದಿ ಈಗಾಗಲೇ ಹರಿದಾಡುತ್ತಿದೆ. ಅದರ ನಡುವೆ ಮತ್ತೊಂದು ಸುದ್ದಿ ಕೇಳಿಬರುತ್ತಿದೆ.

ಹೊಂಬಾಳೆ ಫಿಲಂಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ಕಾಂತಾರ 2 ಬಗ್ಗೆ ಭಾರೀ ನಿರೀಕ್ಷೆಯಿದೆ. ಕಾಂತಾರ 1 ಯಶಸ್ವಿಯಾಗಿದ್ದೇ ಇದಕ್ಕೆ ಕಾರಣ. ಪರಭಾಷಿಗರೂ ಈ ಸಿನಿಮಾ ಯಾವಾಗ ಬಿಡುಗಡೆಯಾಗುತ್ತದೆ ಎಂದು ಎದಿರು ನೋಡುತ್ತಿದ್ದಾರೆ. ಈ ನಡುವೆ ನವಂಬರ್ 27 ರಂದು ಚಿತ್ರಕ್ಕೆ ಚಾಲನೆ ಸಿಗಲಿದೆ ಎಂಬ ಮಾತು ಕೇಳಿಬಂದಿತ್ತು.

ಆದರೆ ಅದಕ್ಕೆ ಮೊದಲು ಚಿತ್ರತಂಡ ಗುಳಿಗ ಮತ್ತು ಪಂಜುರ್ಲಿ ದೈವದ ಒಪ್ಪಿಗೆ ಪಡೆದಿದೆಯಂತೆ. ದೈವದ ಒಪ್ಪಿಗೆಯೊಂದಿಗೇ ಚಿತ್ರೀಕರಣ ಪ್ರಾರಂಭಿಸಲು ರಿಷಬ್ ಆಂಡ್ ಟೀಂ ನಿರ್ಧರಿಸಿದ್ದಾರೆ.

ಇದಕ್ಕೆ ಮೊದಲು ಕಾಂತಾರ 2 ಚಿತ್ರ ಮಾಡಬಹುದೇ ಎಂಬುದನ್ನೂ ರಿಷಬ್ ದೈವದ ಬಳಿ ಪ್ರಶ್ನೆ ಮಾಡಿದ್ದರು. ದೈವದ ಒಪ್ಪಿಗೆ ಸಿಕ್ಕ ನಂತರವಷ್ಟೇ ಕಾಂತಾರ 2 ಸಿನಿಮಾಗೆ ಚಾಲನೆ ನೀಡಲು ನಿರ್ಧರಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments