ಹೈದರಾಬಾದ್ : ನಟಿ ಅನುಷ್ಕಾ ದಕ್ಷಿಣ ಚಿತ್ರರಂಗದ ಖ್ಯಾತ ನಟಿ. ಅವರು ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮಹಿಳಾ ಪೊಲೀಸ್ ಅಧಿಕಾರಿಗಳನ್ನು ಸೂಪರ್ ಸ್ಟಾರ್ ಗಳು ಎಂದು ಕರೆದಿದ್ದಾರೆ.
									
										
								
																	
ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ನಡೆದ ಫ್ರೀ ಶ್ರೀ ಶಟಲ್ ಬಸ್ ಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ನಟಿ ಅನುಷ್ಕಾ ಶೆಟ್ಟಿ ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ಹಾಗೇ ಉತ್ತಮ ಸಾಧನೆ ಮಾಡಿದವರಿಗೆ ಪ್ರಮಾಣಪತ್ರ ನೀಡಿ ಸಮ್ಮಾನಿಸಲಾಗಿತ್ತು.
									
			
			 
 			
 
 			
			                     
							
							
			        							
								
																	ಈ ಸಂದರ್ಭದಲ್ಲಿ ಮಾತನಾಡಿದ ನಟಿ ಅನುಷ್ಕಾ, ಮಹಿಳಾ ಪೊಲೀಸ್ ಅಧಿಕಾರಿಗಳನ್ನು ಸೂಪರ್ ಸ್ಟಾರ್ ಗಳೆ. ಅವರು ಕೊರೊನಾ ಸಮಯದಲ್ಲಿ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿರುವುದು ಕಂಡು ಸಂತೋಷವಾಗಿದೆ ಎಂದು ಹೇಳಿದ್ದಾರೆ.