Publish Date: Mon, 01 Nov 2021 (17:37 IST)
Updated Date: Mon, 01 Nov 2021 (17:40 IST)
ಸಾವಿನಲ್ಲೂ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಸಾರ್ಥಕತೆ ಮೆರೆದಿದ್ದರು. ಡಾ.ರಾಜ್ಕುಮಾರ್ ಅವರಂತೆ ನೇತ್ರದಾನ ಮಾಡಿದ್ದರು.
ಈಗ ಅಪ್ಪು ಅವರ ಎರಡು ಕಣ್ಣು, ಕತ್ತಲೇ ತುಂಬಿದ್ದ ನಾಲ್ವರ ಬಾಳಲ್ಲಿ ಬೆಳಕು ಮೂಡಿಸಿದೆ. ಹೌದು, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನೇತ್ರದಾನ ಮಾಡಿದ್ದರು. ಅಪ್ಪು ಕಣ್ಣನ್ನು ನಾಲ್ವರಿಗೆ ಅಳವಡಿಕೆ ಮಾಡಲಾಗಿದೆ ಅಂತ ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ನಾಲ್ವರ ಬದುಕಲ್ಲಿ ಬೆಳಕಾದ ಅಪ್ಪು!
ಪುನೀತ್ ರಾಜ್ಕುಮಾರ್ ಕಣ್ಣುಗಳನ್ನು ಪಡೆದು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಶನಿವಾರ ನಾಲ್ವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸಾಮಾನ್ಯವಾಗಿ 2 ಕಣ್ಣು ಇಬ್ಬರಿಗೆ ಅಳವಡಿಸುವುದು ಸಾಮಾನ್ಯ. ಆದರೆ ಪುನೀತ್ರ 2 ಕಣ್ಣುಗಳಿಂದ ನಾಲ್ವರಿಗೆ ದೃಷ್ಟಿ ಬಂದಿದೆ. ಹೊಸ ತಂತ್ರಜ್ಞಾನದ ಮೂಲಕ ನಾಲ್ವರಿಗೆ ದೃಷ್ಟಿ ನೀಡಲಾಗಿದೆ ಎಂದು ಬೆಂಗಳೂರಿನಲ್ಲಿ ಡಾ.ಭುಜಂಗಶೆಟ್ಟಿ ಮಾಹಿತಿ ನೀಡಿದ್ದಾರೆ.