Publish Date: Fri, 09 Apr 2021 (10:59 IST)
Updated Date: Fri, 09 Apr 2021 (11:01 IST)
ಬೆಂಗಳೂರು: ಕೊರೋನಾ ಸೋಂಕಿನಿಂದ ಬಳಲುತ್ತಿರುವ ಸಂಗೀತ ಸಂಯೋಜಕ ಅರ್ಜುನ್ ಜನ್ಯಾ ಈಗ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೊನ್ನೆಯಷ್ಟೇ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಇದಾದ ಬಳಿಕ ಅವರು ಹೋಂ ಕ್ವಾರಂಟೈನ್ ನಲ್ಲಿದ್ದರು. ಆದರೆ ಇದೀಗ ವೈದ್ಯರ ಸಲಹೆ ಮೇರೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ವರ್ಷ ಅವರು ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಯಾವುದೇ ಅಪಾಯವಾಗದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲು ತೀರ್ಮಾನಿಸಿದ್ದಾರೆ. ಇದೀಗ ಅವರು ಚೇತರಿಸಿಕೊಳ್ಳುವ ಹಂತದಲ್ಲಿದ್ದಾರೆ ಎಂದು ತಿಳಿದುಬಂದಿದೆ.