ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಶೃತಿ ಹರಿಹರನ್ ಬೆಂಬಲಕ್ಕೆ ನಿಂತ ನಟ ಪ್ರಕಾಶ್ ರೈ

Webdunia
ಸೋಮವಾರ, 22 ಅಕ್ಟೋಬರ್ 2018 (07:09 IST)
ಬೆಂಗಳೂರು : ಮೀಟೂ ಅಭಿಯಾನದಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಮಾಡಿದ ಲೈಂಗಿಕ ಕಿರುಕುಳ ಆರೋಪಕ್ಕೆ  ಇದೀಗ ಬಹುಭಾಷಾ ನಟ ಪ್ರಕಾಶ್ ರೈ ಅವರು ಶೃತಿ ಅವರ ಪರವಾಗಿ ನಿಂತಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ನಟ ಪ್ರಕಾಶ್ ರೈ ಅವರು,’ ಶ್ರುತಿ ಹರಿಹರನ್ ಕನ್ನಡ ಚಿತ್ರರಂಗ ಕಂಡ ಪ್ರತಿಭಾವಂತೆ ದಿಟ್ಟ ಹೆಣ್ಣು. ಅರ್ಜುನ್ ಸರ್ಜಾ ಅವರು ಕನ್ನಡದ ಹೆಮ್ಮೆ. ಹಿರಿಯ ನಟರೂ ಎಂಬುದನ್ನೂ ಮರೆಯದಿರೋಣ. ಆದರೆ ಶೃತಿಯವರ ಆರೋಪದ ಹಿನ್ನೆಲೆಯಲ್ಲಿ ಆ ಹೆಣ್ಣು ಅನುಭವಿಸಿದ ಅಸಹಾಯಕತೆ, ಅವಮಾನ, ಇಷ್ಟು ದಿನಗಳ ಕಾಲ ತನ್ನೊಳಗೆ ಹುದುಗಿಸಿಟ್ಟ ಆ ಗಾಯದ ನೋವನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. ಅರ್ಜುನ್ ಅವರು ಈ ಆರೋಪವನ್ನು ಅಲ್ಲಗಳೆದರೂ ಅವರ ಆ ದಿನದ ವರ್ತನೆ ಆಕೆಯಲ್ಲಿ ಉಂಟು ಮಾಡಿದ ನೋವಿಗಾಗಿ ಕ್ಷಮೆ ಕೇಳುವುದು ದೊಡ್ಡತನದ ಲಕ್ಷಣ’ ಎಂದು ಹೇಳಿದ್ದಾರೆ.


ಅರಿತೋ ಅರಿಯದೆಯೋ ನಾವು ಗಂಡಸರು ಹುಟ್ಟಿನಿಂದಲೇ ಹೆಣ್ಣಿನ ಬೇಕು, ಬೇಡಗಳ ಬಗ್ಗೆ ಸೂಕ್ಷ್ಮತೆಯನ್ನು ಕಳೆದುಕೊಂಡಿರುವುದು ನಿಜ. ಹೆಣ್ಣು ಮಕ್ಕಳು ತಮ್ಮ ಹಕ್ಕನ್ನು ಅರಿಯದೆ ಇರುವುದೂ ಅಷ್ಟೇ ನಿಜ. ಪ್ರಸ್ತುತ ಹೆಣ್ಣುಮಕ್ಕಳ ಈ ಮೀ ಟೂ ಅಭಿಯಾನ ಮುಂದಿನ ದಿನಗಳಲ್ಲಾದರೂ ನಮ್ಮ ಸಮಾಜದಲ್ಲಿ ಅವರ ಮೇಲಿನ ಶತಮಾನಗಳ ದೌರ್ಜನ್ಯ, ಅವಮಾನ ಹಾಗೂ ಅಸಹಾಯಕತೆಗೆ ಕೊನೆಯನ್ನು ಕಾಣಲಿ. ನಾನು ಶೃತಿ ಹರಿಹರನ್ ಅವರ ಪರವಾಗಿ ಈ ಮೂಲಕ ಎಲ್ಲಾ ನೊಂದ ಹೆಣ್ಣು ಮಕ್ಕಳ ಪರವಾಗಿ ನಿಲ್ಲುತ್ತೇನೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ