Webdunia - Bharat's app for daily news and videos

Install App

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Sampriya
ಭಾನುವಾರ, 20 ಏಪ್ರಿಲ್ 2025 (12:00 IST)
Photo Courtesy X
ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಕಿರಿಯ ಪುತ್ರಿ ಅಂಜನಾ ಅವರು ಇಟಲಿಯ ಉದ್ಯಮಿ ಎಶಾಯ್ ಎಂಬುವವರ ಜೊತೆ ಈಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಶೀಘ್ರದಲ್ಲೇ ಅಂಜನಾ- ಎಶಾಯ್ ಮದುವೆ ನಡೆಯಲಿದೆ  

ಅರ್ಜುನ್ ಅವರ ಕಿರಿಯ ಪುತ್ರಿ 25 ವರ್ಷದ ಅಂಜನಾ ಮತ್ತು ಇಟಲಿಯ ಎಶಾಯ್ ಅವರ ನಿಶ್ಚಿತಾರ್ಥದ ಫೋಟೊಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಂಜನಾ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದಾರೆ.

ಇಟಲಿಯ ಲೇಕ್ ಕೊಮೊದಲ್ಲಿ ಅಂಜನಾ ಮತ್ತು ಎಶಾಯ್ ಉಂಗುರ ಬದಲಿಸಿಕೊಂಡಿದ್ದಾರೆ. ಅಂಜನಾ ಅವರು ಕಲಾವಿದೆ ಹಾಗೂ ಫ್ಯಾಷನ್ ಡಿಸೈನರ್ ಕೂಡ ಹೌದು. ಎಶಾಯ್ ಅವರು ಇಟಲಿಯಲ್ಲಿ ಮನರಂಜನಾ ಕ್ಷೇತ್ರದ ಉದ್ಯಮಿಯಾಗಿದ್ದಾರೆ.

ಅಂಜನಾ ಹಾಗೂ ಎಶಾಯ್ ಅವರು ಕಳೆದ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ವಿದ್ಯಾಭ್ಯಾಸಕ್ಕೆ ತೆರಳಿದ್ದ ಅಂಜನಾ ಸದ್ಯ ಇಟಲಿಯಲ್ಲೇ ನೆಲೆಸಿದ್ದಾರೆ. ಇತ್ತೀಚೆಗೆ ಅರ್ಜುನ್ ಅವರ ಹಿರಿಯ ಪುತ್ರಿ ನಟಿ ಐಶ್ವರ್ಯ ಅವರು ತಮಿಳು ನಟ ಉಮಾಪತಿ ರಾಮಯ್ಯ ಅವರನ್ನು ಮದುವೆಯಾಗಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments