Select Your Language

Notifications

webdunia
webdunia
webdunia
webdunia

ಬಾಲಿವುಡ್‌ ನಟ ಸೋನು ಸೂದ್‌ ವಿರುದ್ಧ ಬಂಧನ ವಾರೆಂಟ್‌: ಕಾರಣ ಇಲ್ಲಿದೆ ನೋಡಿ

Bollywood actor Sonu Sood

Sampriya

ಕೋಲ್ಕತ್ತಾ , ಶುಕ್ರವಾರ, 7 ಫೆಬ್ರವರಿ 2025 (09:54 IST)
Photo Courtesy X
ಕೋಲ್ಕತ್ತಾ: ವಂಚನೆ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪಂಜಾಬ್ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ.

ಲುಧಿಯಾನ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ರಮಣಪ್ರೀತ್ ಕೌರ್ ಅವರು ಈ ವಾರೆಂಟ್ ಹೊರಡಿಸಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ವಿಚಾರಣೆಯನ್ನು ಫೆ.10 ಕ್ಕೆ ಕೋರ್ಸ್‌ ನಿಗದಿಪಡಿಸಿದೆ.

ಲುಧಿಯಾನ ಮೂಲದ ವಕೀಲ ರಾಜೇಶ್ ಖನ್ನಾ ಅವರು ಮೋಹಿತ್ ಶುಕ್ಲಾ ವಿರುದ್ಧ ₹10 ಲಕ್ಷ ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ನಕಲಿ ರಿಜಿಕಾ ನಾಣ್ಯದಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಸಾಕ್ಷ್ಯ ಹೇಳಲು ಸೋನು ಸೂದ್ ಅವರಿಗೆ ನ್ಯಾಯಾಲಯಕ್ಕೆ ಬರುವಂತೆ ಸೂಚಿಸಲಾಗಿತ್ತು. ಆದರೆ, ಅವರು ಹಾಜರಾಗಲು ವಿಫಲರಾದ ಕಾರಣ ಬಂಧನ ವಾರೆಂಟ್ ಹೊರಡಿಸಲಾಗಿದೆ.

ಸೋನು ಸೂದ್ ಅವರನ್ನು ಬಂಧಿಸುವಂತೆ ಮುಂಬೈನ ಅಂಧೇರಿ ಪಶ್ಚಿಮದಲ್ಲಿರುವ ಓಶಿವಾರಾ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿಗೆ ಲುಧಿಯಾನ ನ್ಯಾಯಾಲಯವು ನಿರ್ದೇಶಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಂದೆಯ ಸೆಟ್‌ಗೆ ದಿಢೀರ್ ಭೇಟಿ ನೀಡಿದ ಕ್ಲಿನ್ ಕ್ಲಾರಾ, ಪುಟ್ಟ ಅತಿಥಿಯನ್ನು ಕಂಡು ಶಾಕ್ ಆದ ರಾಮ್‌ ಚರಣ್‌