ಬಾಲಿವುಡ್‌ ನಟ ಸೋನು ಸೂದ್‌ ವಿರುದ್ಧ ಬಂಧನ ವಾರೆಂಟ್‌: ಕಾರಣ ಇಲ್ಲಿದೆ ನೋಡಿ

Sampriya
ಶುಕ್ರವಾರ, 7 ಫೆಬ್ರವರಿ 2025 (09:54 IST)
Photo Courtesy X
ಕೋಲ್ಕತ್ತಾ: ವಂಚನೆ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪಂಜಾಬ್ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ.

ಲುಧಿಯಾನ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ರಮಣಪ್ರೀತ್ ಕೌರ್ ಅವರು ಈ ವಾರೆಂಟ್ ಹೊರಡಿಸಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ವಿಚಾರಣೆಯನ್ನು ಫೆ.10 ಕ್ಕೆ ಕೋರ್ಸ್‌ ನಿಗದಿಪಡಿಸಿದೆ.

ಲುಧಿಯಾನ ಮೂಲದ ವಕೀಲ ರಾಜೇಶ್ ಖನ್ನಾ ಅವರು ಮೋಹಿತ್ ಶುಕ್ಲಾ ವಿರುದ್ಧ ₹10 ಲಕ್ಷ ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ನಕಲಿ ರಿಜಿಕಾ ನಾಣ್ಯದಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಸಾಕ್ಷ್ಯ ಹೇಳಲು ಸೋನು ಸೂದ್ ಅವರಿಗೆ ನ್ಯಾಯಾಲಯಕ್ಕೆ ಬರುವಂತೆ ಸೂಚಿಸಲಾಗಿತ್ತು. ಆದರೆ, ಅವರು ಹಾಜರಾಗಲು ವಿಫಲರಾದ ಕಾರಣ ಬಂಧನ ವಾರೆಂಟ್ ಹೊರಡಿಸಲಾಗಿದೆ.

ಸೋನು ಸೂದ್ ಅವರನ್ನು ಬಂಧಿಸುವಂತೆ ಮುಂಬೈನ ಅಂಧೇರಿ ಪಶ್ಚಿಮದಲ್ಲಿರುವ ಓಶಿವಾರಾ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿಗೆ ಲುಧಿಯಾನ ನ್ಯಾಯಾಲಯವು ನಿರ್ದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಮುಂದಿನ ಸುದ್ದಿ
Show comments