Publish Date: Tue, 30 Nov 2021 (10:00 IST)
Updated Date: Tue, 30 Nov 2021 (10:06 IST)
ಹೈದರಾಬಾದ್: ಪ್ಯಾನ್ ಇಂಡಿಯಾ ಆರ್ ಆರ್ ಆರ್ ಸಿನಿಮಾದಲ್ಲಿ ಕನ್ನಡದ ನಟ, ಕಲಾ ನಿರ್ದೇಶಕ ಅರುಣ್ ಸಾಗರ್ ಅತಿಥಿ ಪಾತ್ರವೊಂದರಲ್ಲಿ ಅಭಿನಯಿಸಿದ್ದಾರೆ.
ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾ ತೆಲುಗಿನಲ್ಲಿ ಮಾತ್ರವಲ್ಲದೆ, ತಮಿಳು, ಮಲಯಾಳಂ, ಕನ್ನಡ, ಹಿಂದಿ ಭಾಷೆಗಳಲ್ಲೂ ಬಿಡುಗಡೆಯಾಗುತ್ತಿದೆ. ಜ್ಯೂ.ಎನ್ ಟಿಆರ್, ರಾಮ್ ಚರಣ್ ತೇಜ್, ಅಜಯ್ ದೇವಗನ್ ಮುಂತಾದ ಘಟಾನುಘಟಿಗಳು ಪ್ರಮುಖ ಪಾತ್ರದಲ್ಲಿದ್ದಾರೆ.
ಅರುಣ್ ಸಾಗರ್ ಕೂಡಾ ಈ ಸಿನಿಮಾದಲ್ಲಿ ಆರಂಭದ ದೃಶ್ಯಗಳಲ್ಲಿ ಒಂದು ಪುಟ್ಟ ಪಾತ್ರ ಮಾಡಲಿದ್ದಾರೆ. ಅವರ ಪಾತ್ರದ ಬಗ್ಗೆ ಹೆಚ್ಚಿನ ವಿವರನ್ನು ಟೀಂ ಇನ್ನೂ ಬಿಟ್ಟುಕೊಟ್ಟಿಲ್ಲ.