Publish Date: Fri, 27 May 2022 (15:39 IST)
Updated Date: Fri, 27 May 2022 (16:13 IST)
ಮುಂಬೈ: ಐಷಾರಾಮಿ ಹಡಗಿನಲ್ಲಿ ಪಾರ್ಟಿ ಮಾಡುತ್ತಿದ್ದಾಗ ಡ್ರಗ್ ಕೇಸ್ ನಲ್ಲಿ ಬಂಧಿತರಾಗಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಕ್ಲೀನ್ ಚಿಟ್ ನೀಡಲಾಗಿದೆ.
ಎನ್ ಸಿಬಿ ಅಧಿಕಾರಿಯಾಗಿದ್ದ ಸಮೀರ್ ವಾಂಖೆಡೆ ನೇತೃತ್ವದ ತಂಡ ಕಳೆದ ವರ್ಷ ದಾಳಿ ನಡೆಸಿ ಶಾರುಖ್ ಪುತ್ರ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿತ್ತು. ಆರ್ಯನ್ ಆ ಸಂದರ್ಭದಲ್ಲಿ ಒಂದು ತಿಂಗಳು ಸೆರೆ ವಾಸ ಅನುಭವಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಈ ಪ್ರಕರದಲ್ಲಿ ಸಮೀರ್ ವಾಂಖೆಡೆ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದರಿಂದ ಅವರನ್ನು ತನಿಖಾಧಿಕಾರಿ ಸ್ಥಾನದಿಂದ ಕಿತ್ತು ಹಾಕಿ ಅವರ ವಿರುದ್ಧ ತನಿಖೆಯನ್ನೂ ನಡೆಸಲಾಯಿತು.
ಇದೀಗ ಕೇಂದ್ರ ವಲಯದ ಎನ್ ಸಿಬಿ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿ ಕೋರ್ಟ್ ಗೆ 6000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಆರ್ಯನ್ ರನ್ನು ನಿರ್ದೋಷಿ ಎಂದು ಕೋರ್ಟ್ ಆದೇಶ ಹೊರಡಿಸಿದೆ.