ಹೈದರಾಬಾದ್: ಕನ್ನಡ ನಟಿಯರು ಇತ್ತೀಚೆಗೆ ತೆಲುಗಿನಲ್ಲಿ ಮಿಂಚುತ್ತಿರುವುದು ಹೊಸದೇನಲ್ಲ. ಆ ಸಾಲಿಗೆ ನಟಿ ಆಶಿಕಾ ರಂಗನಾಥ್ ಕೂಡಾ ಸೇರುತ್ತಿದ್ದಾರೆ.
ಆಶಿಕಾ ಈಗಾಗಲೇ ತೆಲುಗಿನಲ್ಲಿ ಒಂದು ಸಿನಿಮಾದಲ್ಲಿ ನಟಿಸಿದ್ದರು. ಇದೀಗ ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನಗೆ ನಾಯಕಿಯಾಗುವ ಅದೃಷ್ಟ ಗಿಟ್ಟಿಸಿಕೊಂಡಿದ್ದಾರೆ.
ನಾಗಾರ್ಜುನ ಅವರ ನಾ ಸಾಮಿ ರಂಗ ಸಿನಿಮಾಗೆ ಆಶಿಕಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಫೋಟೋ ಶೂಟ್ ಕೂಡಾ ನಡೆದಿದೆ. ಆಶಿಕಾ ಈ ಸಿನಿಮಾದಲ್ಲಿ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ.