ಬೆಂಗಳೂರು: ಸ್ವಾತಂತ್ರ್ಯೋತ್ಸವದ 75 ನೇ ವಾರ್ಷಿಕೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಕರೆ ಕೊಟ್ಟಿರುವ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಳ್ಳಲು ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಆಹ್ವಾನ ನೀಡಲಾಗಿದೆ.
ರಾಜ್ಯ ಸರ್ಕಾರದ ವತಿಯಿಂದ ಸಚಿವ ಡಾ.ಅಶ್ವತ್ಥ್ ನಾರಾಯಣ್ ಪುನೀತ್ ನಿವಾಸಕ್ಕೆ ತೆರಳಿ ರಾಷ್ಟ್ರಧ್ವಜ ನೀಡುವ ಮೂಲಕ ಅಭಿಯಾನದಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದ್ದಾರೆ.
ಈ ವೇಳೆ ಅಶ್ವತ್ಥ್ ನಾರಾಯಣ್ ಸ್ವಾಂತ್ರ್ಯೋತ್ಸವದ ಪ್ರಯುಕ್ತ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಅಶ್ವಿನಿ ಪುನೀತ್ ಗೆ ಮಾಹಿತಿ ನೀಡಿದ್ದಾರೆ. ಪುನೀತ್ ಅವರ ಹೆಸರಲ್ಲಿ ವಿದ್ಯಾರ್ಥಿಗಳೇ ತಯಾರಾಗಿದೆ. ಅದನ್ನು ಆಗಸ್ಟ್ 15 ಕ್ಕೆ ಲಾಂಚ್ ಮಾಡೋಣ ಎಂದುಕೊಂಡಿದ್ದೆವು ಎಂದು ಅಶ್ವತ್ಥ್ ನಾರಾಯಣ್ ಮಾಹಿತಿ ನೀಡಿದ್ದಾರೆ.