Publish Date: Mon, 08 Nov 2021 (10:50 IST)
Updated Date: Mon, 08 Nov 2021 (10:57 IST)
ಬೆಂಗಳೂರು: ಇತ್ತೀಚೆಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಪತ್ರ ಬರೆದು ಧನ್ಯವಾದ ಸಲ್ಲಿಸಿದ್ದಾರೆ.
ಪುನೀತ್ ಅಗಲಿದ ಬಳಿಕ ಅಭಿಮಾನಿಗಳು ಭಾವೋದ್ವೇಗಕ್ಕೊಳಗಾಗಿದ್ದರು. ಈ ಸಂದರ್ಭದಲ್ಲಿ ಯಾರಿಗೂ ತೊಂದರೆಯಾಗದಂತೆ ಪೊಲೀಸರು ಪರಿಸ್ಥಿತಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದರು.
ಪೊಲೀಸರ ಕರ್ತವ್ಯ ನಿಷ್ಠೆಯಿಂದ ಕುಟುಂಬಸ್ಥರು ಯಾವುದೇ ಅಹಿತಕರ ಘಟನೆಗಳಿಗೆ ಸಾಕ್ಷಿಯಾಗದೇ ಮನೆ ಮಗನ ಅಂತ್ಯ ಸಂಸ್ಕಾರ ನಡೆಸಿದ್ದರು. ಹೀಗಾಗಿ ಪುನೀತ್ ಪತ್ನಿ ಅಶ್ವಿನಿ ಪತ್ರ ಬರೆದು ಪೊಲೀಸರು ಮತ್ತು ಗೃಹ ಸಚಿವರಿಗೆ ಧನ್ಯವಾದ ಸಲ್ಲಿಸಿದ್ದಾರೆ.