ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಯಾವತ್ತೂ ಕಿರುತೆರೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೇ ಇಲ್ಲ. ಆದರೆ ಈಗ ಇದೇ ಮೊದಲ ಬಾರಿಗೆ ಡ್ಯಾನ್ಸ್ ಶೋ ಒಂದರಲ್ಲಿ ಭಾಗಿಯಾಗುತ್ತಿದ್ದಾರೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಡ್ಯಾನ್ಸಿಂಗ್ ರಿಯಾಲಿಟಿ ಶೋ ಅಂತಿಮ ಹಂತಕ್ಕೆ ಬಂದಿದ್ದು, ಇದೀಗ ಈ ವಾರಂತ್ಯಕ್ಕೆ ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ಈ ಅದ್ಧೂರಿ ಗ್ರ್ಯಾಂಡ್ ಫಿನಾಲೆಯಲ್ಲಿ ಅಶ್ವಿನಿ ಪುನೀತ್ ಕೂಡಾ ಭಾಗಿಯಾಗಲಿದ್ದಾರೆ.
ಮೇಘನಾ ರಾಜ್, ಮಯೂರಿ, ವಿಜಯ್ ರಾಘವೇಂದ್ರ ತೀರ್ಪುಗಾರರಾಗಿರುವ ಶೋಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅತಿಥಿಯಾಗಲಿದ್ದಾರೆ. ಇವರ ಜೊತೆಗೆ ಅಶ‍್ವಿನಿ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಅಶ್ವಿನಿ ಇಂತಹ ಕಾರ್ಯಕ್ರಮಕ್ಕೆ ಬರುವುದೇ ಅಪರೂಪ. ಅದರಲ್ಲೂ ರಿಯಾಲಿಟಿ ಶೋನಲ್ಲಿ ಬಂದು ಮಾತನಾಡಲಿದ್ದಾರೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.