ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

Sampriya
ಗುರುವಾರ, 20 ನವೆಂಬರ್ 2025 (16:04 IST)
p
ರಾಮನಗರ: ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್‌ಬಾಸ್‌ನ 12ನೇ ಆವೃತ್ತಿ ಈಗಾಗಲೇ 50 ದಿನ ಪೂರೈಸಿದ್ದು, ನೂರನೇ ದಿನದತ್ತ ಸಾಗುತ್ತಿದೆ. ಈ ಮಧ್ಯೆ ಬಿಗ್‌ಬಾಸ್‌ ಮನೆಯಲ್ಲಿ ನಡೆದ ಘಟನೆಯೊಂದು ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಸ್ಪರ್ಧಿ ಗಿಲ್ಲಿನಟನ ಮೇಲೆ ಸಹ ಸ್ಪರ್ಧಿ ರಿಷಾ ಗೌಡ  ಹಲ್ಲೆ ಮಾಡಿದ್ದು, ಆಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗಿಲ್ಲಿ ನಟನ ಅಭಿಮಾನಿಗಳು ರಾಮನಗರ ಜಿಲ್ಲಾ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಗಿಲ್ಲಿ ನಟನ ಅಭಿಮಾನಿಗಳ ಪರವಾಗಿ ಮಧು ಎಂಬವರು ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ರಿಷಾ ಗೌಡ, ಗಿಲ್ಲಿ ನಟನ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಬಿಗ್‌ಬಾಸ್ ಆಯೋಜಕರು ಸುಮ್ಮನಾಗಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ವಾರದ ಕಿಚ್ಚನ ಪಂಚಾಯಿತಿಯಲ್ಲಿ ಚರ್ಚೆ ನಡೆದು, ರಿಷಾಗೆ ಎಚ್ಚರಿಕೆ ನೀಡಲಾಗಿತ್ತು.

ಗಿಲ್ಲಿ ನಟನ ಮೇಲೆ ನಡೆದ ಹಲ್ಲೆಯನ್ನು ಅಭಿಮಾನಿಗಳಾದ ನಾವು ಸುಮ್ಮನಿರುವುದಿಲ್ಲ. ರಿಷಾ ಗೌಡ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಪೊಲೀಸರಿಗೆ ಮನವಿ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ಮುಂದಿನ ಸುದ್ದಿ
Show comments