Publish Date: Fri, 04 Oct 2019 (08:46 IST)
Updated Date: Fri, 04 Oct 2019 (08:48 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸಿನಿಮಾ ಬಹಳ ದಿನಗಳ ನಂತರ ತೆರೆ ಕಾಣುತ್ತಿದೆ. ಬಹುನಿರೀಕ್ಷಿತ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಬಿಡುಗಡೆ ಮುಂದಿನ ತಿಂಗಳು ಎಂದು ಚಿತ್ರತಂಡ ಘೋಷಿಸಿದೆ.
ಕೆಜಿಎಫ್, ಪೈಲ್ವಾನ್ ನಂತರ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವ ಕನ್ನಡ ಸಿನಿಮಾ ಇದಾಗಿದ್ದು, ಈ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆಯಿದೆ. ಕಿರಿಕ್ ಪಾರ್ಟಿ ಬಳಿಕ ರಕ್ಷಿತ್ ಶೆಟ್ಟಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗುತ್ತಿರುವುದು ಇದೇ ಮೊದಲು.
ನಾಡಹಬ್ಬ ದಸರಾ ಸಂದರ್ಭದಲ್ಲಿ ಚಿತ್ರತಂಡ ಪ್ರಚಾರ ಕೆಲಸಕ್ಕೆ ಚಾಲನೆ ನೀಡಿದ್ದು, ಮುಂದಿನ ತಿಂಗಳು ಸಿನಿಮಾ ರಿಲೀಸ್ ಎಂದು ಘೋಷಿಸಿದೆ. ತೆಲುಗು ಮತ್ತು ಮಲಯಾಳಂನಲ್ಲಿ ಪ್ರಚಾರ ಕೆಲಸ ಈಗಾಗಲೇ ಶುರುವಾಗಿದೆ. ಇದಕ್ಕಾಗಿ ಈಗಾಗಲೇ ಚಿತ್ರತಂಡದ ಜತೆಗೆ ರಕ್ಷಿತ್ ಶೆಟ್ಟಿ ಕೇರಳ, ಹೈದರಾಬಾದ್ ಎಂದು ಓಡಾಡುತ್ತಿದ್ದಾರೆ. ಬಿಡುಗಡೆ ದಿನಾಂಕ ಸದ್ಯದಲ್ಲೇ ಘೋಷಣೆಯಾಗಲಿದೆ.