Publish Date: Sat, 19 Oct 2019 (11:21 IST)
Updated Date: Sat, 19 Oct 2019 (11:23 IST)
ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ಆಯುಷ್ಮಾನ್ ಭವ ಸಿನಿಮಾ ಹಾಡುಗಳ ರಿಲೀಸ್ ಇಂದು ನಗರದ ಪಂಚತಾರಾ ಹೋಟೆಲ್ ನಲ್ಲಿ ನಡೆಯಲಿದೆ.
ಆಯುಷ್ಮಾನ್ ಭವ ಸಿನಿಮಾ ನವಂಬರ್ 1 ರಂದು ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ಇದಕ್ಕೂ ಮೊದಲು ಇಂದು ಅಡಿಯೋ ರಿಲೀಸ್ ನಡೆಯಲಿದ್ದು, ನಗರದ ದಿ ಲಲಿಲ್ ಅಶೋಕ್ ಹೋಟೆಲ್ ನಲ್ಲಿ ನಡೆಯುತ್ತಿದೆ.
ಈ ಕಾರ್ಯಕ್ರಮ ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಇಂದು ಸಂಜೆ 7 ಗಂಟೆಗೆ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.