Webdunia - Bharat's app for daily news and videos

Install App

ರಸ್ತೆ ಪಕ್ಕದಲ್ಲಿ ಹಿರಿಯ ನಟಿ ಜಯಮ್ಮ ಮೃತದೇಹ: ಕುಟುಂಬಸ್ಥರ ಸ್ಪಷ್ಟನೆ

Webdunia
ಶನಿವಾರ, 5 ಜೂನ್ 2021 (09:03 IST)
ಬೆಂಗಳೂರು: ಮೊನ್ನೆಯಷ್ಟೇ ನಿಧನರಾದ ಹಿರಿಯ ನಟಿ ಬಿ. ಜಯಮ್ಮ ಮೃತದೇಹ ರಸ್ತೆ ಪಕ್ಕದಲ್ಲಿ ಅನಾಥವಾಗಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದರ ಬಗ್ಗೆ ಕುಟುಂಬಸ್ಥರೇ ಸ್ಪಷ್ಟನೆ ನೀಡಿದ್ದಾರೆ.


ಕನ್ನಡದಲ್ಲಿ ಹಲವು ಸಿನಿಮಾ, ಧಾರವಾಹಿಗಳಲ್ಲಿ ನಟಿಸಿದ ಹಿರಿಯ ನಟಿ ಮೃತದೇಹ ಕಸದ ರಾಶಿಯ ಪಕ್ಕ, ರಸ್ತೆ ಬದಿಯಲ್ಲಿ ಇಡಲಾಗಿರುವ ದೃಶ್ಯವನ್ನು ಕೆಲವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಅವಿವಾಹಿತರಾಗಿದ್ದ ಜಯಮ್ಮ ಅಂತ್ಯ ಸಂಸ್ಕಾರ ಮಾಡಲು ಕುಟುಂಬಸ್ಥರೂ ಬಂದಿಲ್ಲ. ಹಿರಿಯ ನಟ ಶವ ಅನಾಥವಾಗಿದೆ ಎಂದು ಆರೋಪ ಕೇಳಿಬಂದಿತ್ತು.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಯಾ ಸಹೋದರನ ಪುತ್ರಿ ‘ಕೊವಿಡ್ ನಿಂದಾಗಿ ಅವರ ಅಂತ್ಯಸಂಸ್ಕಾರಕ್ಕೆ ಯಾರೂ ಬರುವುದು ಬೇಡ ಎಂದು ನಾವೇ ಹೇಳಿದ್ದೆವು. 11.30 ರಿಂದ 12 ಗಂಟೆಯವರೆಗೆ ನಮಗೆ ಸ್ಮಶಾನದಲ್ಲಿ ಸಮಯ ನಿಗದಿಯಾಗಿತ್ತು. ಆದರೆ ಒಳಗಡೆ ನಮ್ಮ ಸಂಪ್ರದಾಯ ಪ್ರಕಾರ ವಿಧಿ ವಿಧಾನ ಮಾಡಲು ಅವಕಾಶವಿರಲಿಲ್ಲ. ಹೀಗಾಗಿ ಅಲ್ಲಿನ ನಿಯಮದ ಪ್ರಕಾರ ಹೊರಗಡೆಯೇ ಪೂಜೆ ಮಾಡಬೇಕಾಯ್ತು.ಹಾಗಾಗಿ ರಸ್ತೆ ಪಕ್ಕದಲ್ಲೇ ಪೂಜೆ ಮಾಡಿದ್ವಿ.  ಇದನ್ನೇ ಯಾರೋ ವಿಡಿಯೋ ಮಾಡಿ ಅಪಪ್ರಚಾರ ಮಾಡಿದ್ದಾರೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments