ಆಪರೇಷನ್‌ ಇಲ್ಲದೆಯೇ ಬೆನ್ನುನೋವು ಶಮನ: ಶೂಟಿಂಗ್‌ಗಾಗಿ ವಕೌಟ್‌ಗೆ ಸಜ್ಜಾದ ದರ್ಶನ್‌

Sampriya
ಶನಿವಾರ, 25 ಜನವರಿ 2025 (14:19 IST)
ಮೈಸೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರಿಗೆ ಕಾಡುತ್ತಿದ್ದ ಬೆನ್ನುನೋವು ಆಪರೇಷನ್‌ ಇಲ್ಲದೆಯೇ ಕಡಿಮೆಯಾಗಿದ್ದು, ಸದ್ಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯವಿಲ್ಲ ಎನ್ನಲಾಗಿದೆ.

ನಟ ದರ್ಶನ್‌ ಅವರ ಬೆನ್ನು ನೋವಿವಾಗಿ  ಕಳೆದ ವಾರ ಮೈಸೂರಿನ ವೈದ್ಯ ಡಾ. ಅಜಯ್ ಹೆಗ್ಡೆ ನೀಡಿದ್ದ ಎಪಿಡ್ಯೂರಲ್ ಇಂಜೆಕ್ಷನ್ ಕೆಲಸ ಮಾಡಿದೆ. ಹೀಗಾಗಿ ಕೊಲೆ ಆರೋಪಿ ದರ್ಶನ್‌ಗೆ ಸದ್ಯಕ್ಕೆ ಆಪರೇಷನ್ ಅವಶ್ಯಕತೆ ಇಲ್ಲ. ನಾನು ಮೊದಲಿಗಿಂತಲೂ ಚೆನ್ನಾಗಿದ್ದೇನೆ ಎಂದು ವೈದ್ಯರಿಗೆ ದರ್ಶನ್ ದೂರವಾಣಿ ಮೂಲಕ ಹೇಳಿದ್ದಾರೆ.

ಕಳೆದ ವಾರ ಕೊಟ್ಟ ಇಂಜೆಕ್ಷನ್‌ನಿಂದ ದರ್ಶನ್ ಬೆನ್ನು ನೋವಿನಲ್ಲಿ ಬಹಳಷ್ಟು ಸುಧಾರಣೆ ಆಗಿದೆ. ಬಹುತೇಕ ಇಂಜೆಕ್ಷನ್‌ನಿಂದಲೇ ನೋವು ನಿವಾರಣೆಯಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಈಗಾಗಲೇ ಪ್ರತಿನಿತ್ಯ ವರ್ಕೌಟ್ ಶುರು ಮಾಡಿರುವ ದರ್ಶನ್ ಫುಲ್ ಬಾಡಿ ವರ್ಕೌಟ್ ಶುರು ಮಾಡಿದ ನಂತರ ಏನಾದರು ನೋವು ಕಾಣಿಸಿಕೊಂಡರೆ ಮತ್ತೆ ಪರೀಕ್ಷೆಗೆ ಒಳಪಡಲಿದ್ದಾರೆ ಎಂದು ತಿಳಿದುಬಂದಿದೆ.

ಫೆಬ್ರುವರಿಯಿಂದ ಶೂಟಿಂಗ್‌ನಲ್ಲಿ ನಿರಂತರವಾಗಿ ಭಾಗವಹಿಸುವ ನಟ ದರ್ಶನ್ ದೇಹವನ್ನು ಮೊದಲಿನ ರೀತಿ ತರಲು ವರ್ಕೌಟ್‌ಗಳನ್ನು ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ. ವೈದ್ಯರ ಸಲಹೆಯಂತೆ ಮತ್ತೆ ಎಂದಿನ ಶೈಲಿಯಲ್ಲೇ ದರ್ಶನ್ ನಿಧಾನವಾಗಿ ಜಿಮ್‌ನಲ್ಲಿ ಕಸರತ್ತು ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments