Webdunia - Bharat's app for daily news and videos

Install App

ಕನ್ನಡಕ್ಕೆ ಬರಲು ಸಿದ್ಧವಾಗುತ್ತಿದೆ ’ಬಾಹುಬಲಿ 2’ ಸಿನಿಮಾ

Webdunia
ಶುಕ್ರವಾರ, 17 ಫೆಬ್ರವರಿ 2017 (18:48 IST)
ಎಸ್.ಎಸ್. ರಾಜಮೌಳಿ ನಿರ್ಮಾಣದ ಭಾರಿ ಬಜೆಟ್‌ನ ಬಹುನಿರೀಕ್ಷಿತ ಚಿತ್ರ ಬಾಹುಬಲಿ 2 ಇನ್ನೇನು ತೆರೆಗೆ ಬರಲು ಅಣಿಯಾಗುತ್ತಿದೆ. ಬಹುಶಃ ಏಪ್ರಿಲ್ ವೇಳೆಗೆ ಇಡೀ ಜಗತ್ತಿನಾದ್ಯಂತ ಚಿತ್ರ ತೆರೆಕಾಣುವ ಸಾಧ್ಯತೆಗಳಿವೆ.
 
ಈ ಚಿತ್ರ ಹಿಂದಿ, ತಮಿಳು ಸೇರಿದಂತೆ ಹಲವು ಭಾಷೆಗಳಿಗೆ ಡಬ್ ಆಗಿ ರಿಲೀಸ್ ಆಗಲಿದ್ದು ಅದರಲ್ಲಿ ಕನ್ನಡವೂ ಸೇರಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಡಬ್ಬಿಂಗ್ ವಾಣಿಜ್ಯ ಮಂಡಳಿಯ ಅಧ್ಯಕ್ಷ ಕೃಷ್ಣೇಗೌಡರ ಪ್ರಕಾರ ಅವರೇ ಬಾಹುಬಲಿ 1 ಚಿತ್ರವನ್ನು ಡಬ್ ಮಾಡಿ ರಿಲೀಸ್ ಮಾಡಲಿದ್ದಾರಂತೆ. 
 
ಇದರ ಜತೆಗೆ ಭಾಗ 2ರನ್ನು ಮೂಲ ನಿರ್ಮಾಪಕರೇ ಡಬ್ ಮಾಡಿ ಬಿಡುಗಡೆ ಮಾಡಿದರೆ ಕನ್ನಡಿಗರೂ ಅದ್ದೂರಿ ಚಿತ್ರವನ್ನು ಕಣ್ತುಂಬಿಕೊಳ್ಳಬಹುದು ಎನ್ನುತ್ತಾರೆ ಕೃಷ್ಣೇಗೌಡ. ಈ ಹಿನ್ನೆಲೆಯಲ್ಲಿ ಬಾಹುಬಲಿ 2 ಚಿತ್ರ ಕನ್ನಡಕ್ಕೆ ಬರಲಿದೆಯೇ ಎಂಬುದು ಕುತೂಹಲ ಮೂಡಿಸಿದೆ.
 
ಡಬ್ಬಿಂಗ್ ಚಿತ್ರಗಳಿಗೆ ಸ್ಯಾಂಡಲ್‌ವುಡ್ ನಿಷೇಧ ಹೇರಿದ್ದರೂ ಆಗಾಗ ಡಬ್ಬಿಂಗ್ ವಿವಾದ ಸದ್ದು ಮಾಡುವುದು ಗೊತ್ತೇ ಇದೆ. ಈ ಬಾರಿ ಬಾಹುಬಲಿ ರೂಪದಲ್ಲಿ ಅದು ಸಾಧ್ಯವಾದರೂ ಆಗಬಹುದು. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗಾರಾಜ್ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು ಡಬ್ಬಿಂಗ್ ವಿರುದ್ಧ ಗುಡುತ್ತಿರುವುದು ಗೊತ್ತೇ ಇದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments