Select Your Language

Notifications

webdunia
webdunia
webdunia
webdunia

ಬಾಹುಬಲಿ 2 ಚಿತ್ರಕ್ಕೆ ಕರ್ನಾಟಕದಲ್ಲಿ ವಿರೋಧ

ಬಾಹುಬಲಿ 2 ಚಿತ್ರಕ್ಕೆ ಕರ್ನಾಟಕದಲ್ಲಿ ವಿರೋಧ
Bangalore , ಗುರುವಾರ, 23 ಮಾರ್ಚ್ 2017 (11:45 IST)
ಬೆಂಗಳೂರು: ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಬಾಹುಬಲಿ 2 ಬಿಡುಗಡೆಗೆ ಕರ್ನಾಟಕದಲ್ಲಿ ವಿರೋಧ ವ್ಯಕ್ತವಾಗಿದೆ. ಏಪ್ರಿಲ್ 28 ರಂದು ಚಿತ್ರ ಬಿಡುಗಡೆಯಾಗಲಿದೆ.

 

ಆದರೆ ಕರ್ನಾಟಕದಲ್ಲಿ ಬಿಡುಗಡೆಯಾಗುವುದು ಡೌಟು. ಕಾರಣ ತಮಿಳು ನಟ ಸತ್ಯರಾಜ್. ಅವರೇನು ಮಾಡಿದರು ಎಂಬ ಸಂಶಯವೇ? ಅವರ ಹೇಳಿಕೆಯೊಂದರಿಂದ ಈ ಅವಾಂತರವಾಗಿದೆ.

 
ಕಾವೇರಿ ಗಲಭೆ ಸಂದರ್ಭ ಸತ್ಯರಾಜ್ ಕರ್ನಾಟಕದ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯೊಂದರ ಕಾರಣ ಈ ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯಾಗಬಾರದು ಎಂದು ಕನ್ನಡ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.  ಈ ಚಿತ್ರದಲ್ಲಿ ಪ್ರಬಾಸ್ ಜತೆಗೆ ಸತ್ಯರಾಜ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಹೀಗಾಗಿ ಸತ್ಯರಾಜ್ ಕ್ಷಮೆ ಕೇಳುವವರೆಗೂ ರಾಜ್ಯದಲ್ಲಿ ಚಿತ್ರ ಬಿಡುಗಡೆ ಮಾಡಬಾರದು ಎಂದು ಸಂಘಟನೆಗಳು ಒತ್ತಾಯಿಸಿವೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ದುನಿಯಾ ವಿಜಿ ಆತ್ಮಕತೆ ಬರೆಯುತ್ತಾರಂತೆ. ಓದಲು ನೀವು ರೆಡೀನಾ?