ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 21ಕ್ಕೆ ಮುಂದೂಡಿದ್ದು, ಇದರಿಂದ ದರ್ಶನ್ ಸ್ನೇಹಿತೆಗೆ ಜೈಲೇ ಗತಿಯಾಗಿದೆ. ಪವಿತ್ರಾ ಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್ ಮುಂದೂಡಿದೆ.
ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇನ್ನೂ ಮಗಳಿಗೆ ಜಾಮೀನು ಸಿಗುವ ನಿರೀಕ್ಷೆಯಲ್ಲಿ ಕೋರ್ಟ್‌ಗೆ ಬಂದಿದ್ದ ಪವಿತ್ರಾ ಗೌಡ ತಾಯಿ ತಾಯಿ, ಮಗಳಿಗೆ ಜಾಮೀನು ಸಿಗದ ಹಿನ್ನಲೆಯಲ್ಲಿ ಬೇಸರದಿಂದಲೇ ಹೊರನಡೆದರು.
ಇನ್ನೂ ಪ್ರಕರಣ ಎ2 ಆರೋಪಿ ದರ್ಶನ್‌ಗೆ ಆರೋಗ್ಯದ ದೃಷ್ಟಿಯಿಂದ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದೀಗ ಬೆನ್ನು ನೋವಿಗೆ ಆಸ್ಪತ್ರೆಗೆ ಅಡ್ಮಿಟ್ ಆಗಿರುವ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್ ಜಾಮೀನು ಅರ್ಜಿಯೂ 21 ಕ್ಕೆ ವಿಚಾರಣೆಯಲ್ಲಿದೆ.
ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಎಸ್‌ಪಿಪಿ ಪ್ರಸನ್ನಕುಮಾರ್ ಮನವಿ ಮಾಡಿದರು. ಕೋರ್ಟ್ ನ.21 ರಂದು ಪವಿತ್ರಗೌಡ, ದರ್ಶನ್, ಅನುಕುಮಾರ್, ಲಕ್ಷ್ಮಣ್, ನಾಗರಾಜ್ ಜಾಮೀನು ಅರ್ಜಿ ವಿಚಾರಣೆಗೆ ನಿಗದಿಪಡಿಸಿದೆ.