Webdunia - Bharat's app for daily news and videos

Install App

ಸೆಕ್ಸ್ ದೃಶ್ಯಾವಳಿ ಸೆರೆ ಹಿಡಿದು ಬ್ಲ್ಯಾಕ್ ಮೇಲ್: ಮಾದಕ ನಟಿ ಹರಿಣಿ ಸೇರಿ ನಾಲ್ವರ ಬಂಧನ

Webdunia
ಶನಿವಾರ, 1 ಆಗಸ್ಟ್ 2015 (17:50 IST)
ಫ್ಯಾನ್‌ನಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಸರಸದ ದೃಶ್ಯಗಳನ್ನು ಸೆರೆಹಿಡಿದು ಬ್ಲ್ಯಾಕ್ ಮೇಲೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ನಗರದ ಜ್ಞಾನಭಾರತಿ ಠಾಣೆ ಪೊಲೀಸರು ಇಂದು ಬಂಧಿಸಿದ್ದಾರೆ. 
 
ಬಂಧಿತರಲ್ಲಿ ಕಿರುತೆರೆ ನಟಿ ಹರಿಣಿ ಎಂಬ ಯುವತಿಯೂ ಇದ್ದು, ಲೋಕೇಶ್, ಬ್ರಿಜೇಶ್ ಹಾಗೂ ಸುನಿಲ್ ಎಂಬ ನಾಲ್ವರು ಆರೋಪಿಗಳಾಗಿದ್ದಾರೆ. 
 
ಏನಿದು ಪ್ರಕರಣ:
 
ಶ್ರೀಮಂತ ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಈ ನಾಲ್ವರ ಗ್ಯಾಂಗ್, ಶ್ರೀಮಂತ ಗ್ರಾಹಕರನ್ನು ಸೆಳೆದು ಸರಸ ಸಲ್ಲಾಪದಲ್ಲಿ ತೊಡಗುತ್ತಿತ್ತು. ಈ ದೃಶ್ಯಗಳನ್ನು ಫ್ಯಾನ್‌ನಲ್ಲಿ ರಹಸ್ಯ ಕ್ಯಾಮರಾವನ್ನು ಅಳವಡಿಸಿ ಸೆರೆ ಹಿಡಿಯುತ್ತಿದ್ದರು. ಬಳಿಕ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಇಲ್ಲವಾದಲ್ಲಿ ಅಂತರ್ಜಾಲಕ್ಕೆ ಬಿಡುವ ಅಥವಾ ಅತ್ಯಾಚಾರವೆಸಗಿದ ಆರೋಪ ದಾಖಲಿಸಲಾಗುವುದು ಎಂದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎನ್ನಲಾಗಿದೆ. 
 
ಈ ಸಂಬಂಧ ಗ್ರಾಹಕ, ಎಂಜಿನಿಯರ್ ವಿನೋದ್ ಕುಮಾರ್ ಎಂಬುವವರು ನಗರದ ಜ್ಞಾನಭಾರತಿ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಚರಣೆ ನಡೆಸಿರುವ ಪೊಲೀಸರು, ನಾಲ್ವರೂ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
 
ಇನ್ನು ಬಂಧಿತರಿಂದ ಒಂದು ಕಾರು, ಒಂದು ಲಕ್ಷ ನಗದು ಹಣ ಹಾಗೂ 4 ಲಕ್ಷ ನಮೂದಿಸಿದ್ದ ಚೆಕ್‌ನ್ನು ವಶಕ್ಕೆ ಪಡೆದಿದ್ದಾರೆ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?