ಬೆಂಗಳೂರು: ಬಿಗ್ಬಾಸ್ ಸೀಸನ್ 11ರಲ್ಲಿ ಭಾರೀ ನಿರೀಕ್ಷೆ ಹುಟ್ಟು ಹಾಕಿದ್ದ ಮಾನಸಾ ಅವರ ಆಕ್ರಮಣಕಾರಿ ವರ್ತನೆಗೆ ಜನರು ಅಸಮಾಧಾನ ಹೊರಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಮಾನಸ ಅವರ ನಡವಳಿಕೆಗೆ ಜನರು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.
ಈ ವೀಕೆಂಡ್ ನಡೆಸಲು ದೊಡ್ಮನೆಗೆ ಎಂಟ್ರಿ ಕೊಟ್ಟ ಯೋಗರಾಜ್ ಭಟ್ ಅವರು ಕೂಡಾ ಹೊರಗಿನ ಜನರ ಅಭಿಪ್ರಾಯವನ್ನು ಪರೋಕ್ಷವಾಗಿ ಮಾನಸಾಗೆ ತಿಳಿಸಿದ್ದಾರೆ.
ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಪ್ರಕಾರ ಮಾನಸಾ ಅವರೇ ಈ ವಾರ ಎಲಿಮಿನೇಟ್ ಆಗಿದ್ದಾರೆ.
ಬಿಗ್ಬಾಸ್ನಲ್ಲಿ ಗಂಡುಬೀರಿಯ ರೀತಿಯಲ್ಲಿ ವರ್ತಿಸುತ್ತಿದ್ದ ಮಾನಸ, ಚಿಕ್ಕ ವಿಚಾರಕ್ಕೂ ಏರು ಧ್ವನಿಯಲ್ಲಿ ಮಾತನಾಡುತ್ತಿದ್ದರು. ಇದು ಬಿಗ್ಬಾಸ್ ಪ್ರಿಯರಿಗೆ ಕಿರಿಕಿರಿ ಉಂಟು ಮಾಡುತ್ತಿತ್ತು.