BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

Krishnaveni K
ಮಂಗಳವಾರ, 18 ನವೆಂಬರ್ 2025 (09:46 IST)
Photo Credit: X
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 ರಲ್ಲಿ ಪ್ರಮುಖ ಸ್ಪರ್ಧಿಯಾಗಿದ್ದ ಗಿಲ್ಲಿ ಈಗ ಯಾಕೋ ಬರ ಬರುತ್ತಾ ರಾಯರ ಕುದುರೆ ಕತ್ತೆಯಾಯ್ತು ಎನ್ನುವ ಪರಿಸ್ಥಿತಿಯಲ್ಲಿದ್ದಾರೆ.

ಸಹ ಸ್ಪರ್ಧಿ ರಾಶಿಕಾ ಬಟ್ಟೆಗಳನ್ನು ಬಿಸಾಕಿ, ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಗಿಲ್ಲಿ ನಟನ ಮೇಲೆ ಪ್ರಕರಣ ದಾಖಲಾಗಿದೆ. ಗಿಲ್ಲಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿತ್ತು.

ಇದು ಇಷ್ಟಕ್ಕೇ ನಿಂತಿಲ್ಲ ಮೊದ ಮೊದಲು ಈ ಸೀಸನ್ ಗೆಲ್ಲುವ ಸ್ಪರ್ಧಿ ಎನ್ನುವಷ್ಟು ಭರವಸೆ ಮೂಡಿಸಿದ್ದ ಗಿಲ್ಲಿ ಯಾಕೋ ಎರಡು  ವಾರಗಳಿಂದ ಕಾಮಿಡಿ ಮಾಡಲು ಹೋಗಿ ಕಾಮಿಡಿ ಪೀಸ್ ಆಗುತ್ತಿದ್ದಾರೆಯೇ ಎನ್ನುವ ಅನುಮಾನ ಬರುತ್ತಿದೆ.

ಟಾಸ್ಕ್ ನಲ್ಲೂ ಗಂಭೀರವಾಗಿರಬೇಕಾದ ಸಂದರ್ಭದಲ್ಲಿ ಕಾಮಿಡಿ ಮಾಡಲು ಹೋಗಿ ಕಿಚ್ಚ ಸುದೀಪ್ ಕೆಂಗಣ್ಣಿಗೆ ಗುರಿಯಾಗಿದ್ದರು. ಕಾವ್ಯಾ ಜೊತೆಗಿನ ಅವರ ಜಗಳದಿಂದ ಮನೆ ಮಂದಿಗೆಲ್ಲಾ ರೇಷನ್ ಇಲ್ಲದಂತಾಗಿದೆ. ಇದೀಗ ಮನೆಯವರೆಲ್ಲಾ ಗಿಲ್ಲಿ ವಿರುದ್ಧ ತಿರುಗಿಬಿದ್ದಿದ್ದಾರೆ. ಈ ಮೊದಲು ಹೊಗಳಿ ಅಟ್ಟಕ್ಕೇರಿಸುತ್ತಿದ್ದ ಪ್ರೇಕ್ಷಕರೇ ಈಗ ಗಿಲ್ಲಿ ಬಗ್ಗೆ ಬೇಸರ ಹೊರಹಾಕುತ್ತಿದ್ದಾರೆ. ಈ ಮೂಲಕ ತಾವೇ ಸೃಷ್ಟಿ ಮಾಡಿದ್ದ ಇಮೇಜ್ ಹಾಳು ಮಾಡಿಕೊಂಡು ಗೆಲ್ಲುವ ಅವಕಾಶವನ್ನು ಕೈ ಚೆಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments