BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

Krishnaveni K
ಸೋಮವಾರ, 17 ನವೆಂಬರ್ 2025 (11:40 IST)
Photo Credit: X
ಬೆಂಗಳೂರು: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಹೀಗಂತ ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚ ಸುದೀಪ್ ರನ್ನು ಟ್ರೋಲ್ ಮಾಡಲಾಗುತ್ತಿದೆ.
 

ಆಗಿದ್ದು ಇಷ್ಟೇ. ಈ ವೀಕೆಂಡ್ ನಲ್ಲಿ ಕಿಚ್ಚ ಸುದೀಪ್ ಟಾಸ್ಕ್ ವಿಚಾರವಾಗಿ ರಕ್ಷಿತಾ ಶೆಟ್ಟಿ ಮಾಡಿದ್ದನ್ನು ಕಿಚ್ಚ ಸುದೀಪ್ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಸುದೀಪ್ ಹೇಳಿದ್ದು ಏನು ಎಂದು ಅರ್ಥವಾಗಿಲ್ಲ ಎಂದಿದ್ದಾರೆ. ಇದಕ್ಕೆ ಕಿಚ್ಚ ನಾನು ಎರಡು ರೀತಿ ನಗುತ್ತೇನೆ ರಕ್ಷಿತಾ ಅವರೇ. ಒಮ್ಮೆ ಖುಷಿಯಾದಾಗ, ಇನ್ನೊಮ್ಮೆ ತೀರಾ ಏರಿದಾಗ ಎಂದು ನಗುತ್ತಾರೆ. ಈ ವೀಕೆಂಡ್ ನಲ್ಲಿ ರಕ್ಷಿತಾ ಶೆಟ್ಟಿಗೆ ಕಿಚ್ಚ ಕ್ಲಾಸ್ ತೆಗೆದುಕೊಳ್ಳುತ್ತಾರೆ.

ಇದು ರಕ್ಷಿತಾ ಅಭಿಮಾನಿಗಳಿಗೆ ಇಷ್ಟವಾಗಿಲ್ಲ. ಈ ಕಾರಣಕ್ಕೆ ಬಿಗ್ ಬಾಸ್ ಅಭಿಮಾನಿಗಳು ಕಿಚ್ಚ ಸುದೀಪ್ ರನ್ನು ಸೋಷಿಯಲ್ ಮೀಡಿಯಾದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ರಕ್ಷಿತಾ ಚಿಕ್ಕವಳು. ಅವಳು ಮಾಡಿದ ತಪ್ಪನ್ನು ಅಷ್ಟು ದೊಡ್ಡದಾಗಿ, ಏರು ಧ್ವನಿಯಲ್ಲಿ ಬೈದು ಹೇಳ್ತೀರಿ. ಅದೇ ಅಶ್ವಿನಿ ಗೌಡ ತಪ್ಪು ಮಾಡಿದಾಗ ನೀವು ಇಷ್ಟು ಕಠೋರವಾಗಿ ಮಾತಾಡೋದೇ ಇಲ್ಲ. ಯಾಕೆ? ಅಶ್ವಿನಿ ಗೌಡರನ್ನು ಪ್ರಶ್ನಿಸುವ ಧೈರ್ಯ ಮಾಡಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಅಶ್ವಿನಿ ಗೌಡಗೂ ಈ ಬಿಗ್ ಬಾಸ್ ಸೀಸನ್ ನಲ್ಲಿ ಕಿಚ್ಚ ಅನೇಕ ಬಾರಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಆದರೆ ಅದು ಸಾಲಲ್ಲ ಎನ್ನುವುದು ಕೆಲವು ವೀಕ್ಷಕರ ಅಭಿಪ್ರಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments