Publish Date: Mon, 12 Oct 2026 (13:48 IST)
Updated Date: Mon, 12 Oct 2026 (13:51 IST)
ಬೆಂಗಳೂರು: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ ಕೆಲಸವೇನು ಗೊತ್ತಾ? ಈ ಇಬ್ಬರ ವಿಡಿಯೋ ಈಗ ವೈರಲ್ ಆಗಿದೆ.
ಬಿಗ್ ಬಾಸ್ ಕನ್ನಡ ಸೀಸನ್ 13 ರಲ್ಲಿ ಅವಾಚ್ಯ ಶಬ್ಧ ಬಳಸಿ ಮನೆಯ ಮೂಲ ನಿಯಮ ಉಲ್ಲಂಘಿಸಿದ್ದಕ್ಕೆ ಮಂಜನನ್ನು ಹೊರಗೆ ಕಳುಹಿಸಲಾಗಿತ್ತು. ಈ ಬಗ್ಗೆ ವೀಕ್ಷಕರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಗಿದ್ದರೂ ಮಂಜನನ್ನು ಬರಿಗೈಯಲ್ಲಿ ಕಳುಹಿಸಿರಲಿಲ್ಲ. ಎರಡೂವರೆ ಲಕ್ಷ ರೂ.ಗಳ ನಗದು ಬಹುಮಾನ ನೀಡಲಾಗಿತ್ತು.
ಇದೀಗ ಬಿಗ್ ಬಾಸ್ ಮನೆಯಿಂದ ಹೊರ ಬಂದ ಮೇಲೆ ಮಂಜುನಾಥ್ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಂಜುನಾಥ್ ಮತ್ತು ಲಿಖಿತ್ ಜೊತೆಯಾಗಿ ಹುಟ್ಟುಹಬ್ಬ ಆಚರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಬಿಗ್ ಬಾಸ್ ಮನೆಯಲ್ಲಿದ್ದಾಗಲೇ ಇಬ್ಬರೂ ಸ್ನೇಹಿತರಾಗಿದ್ದರು. ಇದೀಗ ಬಿಗ್ ಬಾಸ್ ಮನೆಯಿಂದ ಹೊರಬಂದ ಮೇಲೂ ಸ್ನೇಹ ಮುಂದುವರಿದಿದೆ. ಬೈಕ್ ಮೇಲೆ ಕೇಕ್ ಕಟ್ ಮಾಡಿಸಿ ಮಂಜನ ಹುಟ್ಟುಹಬ್ಬವನ್ನು ಲಿಖಿತ್ ಆಚರಿಸಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ