Bengaluru Water Crisis: ಅಣ್ಣ ಚಿರು ಹೆಸರಲ್ಲಿ ಧ್ರುವ ಸರ್ಜಾರಿಂದ ಉಚಿತ ನೀರು ಸರಬರಾಜು

Krishnaveni K
ಗುರುವಾರ, 7 ಮಾರ್ಚ್ 2024 (11:17 IST)
Photo Courtesy: Twitter
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಾರಕಕ್ಕೇರಿದೆ. ಜನ ಕುಡಿಯುವ ನೀರಿಗೂ ಬವಣೆ ಪಡುತ್ತಿದ್ದಾರೆ. ಹಿಂದೆಂದೂ ಕಾಣದ ಬರಗಾಲ ಎದುರಾಗಿದೆ. ಇದೀಗ ನಟ ಧ್ರುವ ಸರ್ಜಾ ನೀರಿನ ದಾಹ ತೀರಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಕೈಲಾದ ಸಹಾಯ ಮಾಡಲು ಯಾವತ್ತೂ ಹಿಂದೆ ಮುಂದೆ ನೋಡಲ್ಲ. ಇದೀಗ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು ಜನರ ಸಂಕಷ್ಟದಲ್ಲಿದ್ದಾರೆ. ಇಂತಹ ಸ್ಥಿತಿಯಲ್ಲಿ ಧ್ರುವ ತಮ್ಮ ಫ್ಯಾನ್ಸ್ ಮೂಲಕ ಟ್ಯಾಂಕರ್ ನಲ್ಲಿ ಕುಡಿಯುವ ನೀರು ಪೂರೈಸುವ ಕೆಲಸಕ್ಕೆ ಮುಂದಾಗಿದ್ದಾರೆ.

ನಟ ಧ್ರುವ ಸರ್ಜಾ ಅಭಿಮಾನಿಗಳ ಬಳಗ ಬಡ ಜನರಿಗೆ ಉಚಿತವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ. ಕೆಂಗೇರಿಯ ಕಾಲೊನಿಗಳಿಗೆ ತೆರಳಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುತ್ತಿದ್ದಾರೆ. ಧ‍್ರುವ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಿನಿಮಾ ಸ್ಟಾರ್ ಗಳೆಂದರೆ ಜನ ದೇವರಂತೆ ನೋಡುತ್ತಾರೆ. ಆದರೆ ಅದಕ್ಕೆ ತಕ್ಕಂತೆ ಅವರು ನಡೆದುಕೊಂಡರೆ ಮಾತ್ರ ಬೆಲೆ. ಈಗ ಧ್ರುವ ಕೂಡಾ ಸಂಕಷ್ಟದ ಸಮಯದಲ್ಲಿ ನೀರು ಪೂರೈಸುವ ಮೂಲಕ ಜನರ ಕಷ್ಟಕ್ಕೆ ನೆರವಾಗಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ನೀರಿನ ಸಂಕಷ್ಟ ಇನ್ನಷ್ಟು ಹೆಚ್ಚಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments