Select Your Language

Notifications

webdunia
webdunia
webdunia
webdunia

‘ಹೆಬ್ಬೆಟ್ಟು ರಾಮಕ್ಕ’ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಚಿತ್ರ ಪ್ರಶಸ್ತಿ; ಸಂತಸ ವ್ಯಕ್ತಪಡಿಸಿದ ನಟಿ ತಾರಾ

‘ಹೆಬ್ಬೆಟ್ಟು ರಾಮಕ್ಕ’ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಚಿತ್ರ ಪ್ರಶಸ್ತಿ; ಸಂತಸ ವ್ಯಕ್ತಪಡಿಸಿದ ನಟಿ ತಾರಾ
ಬೆಂಗಳೂರು , ಭಾನುವಾರ, 15 ಏಪ್ರಿಲ್ 2018 (13:08 IST)
ಬೆಂಗಳೂರು : ನಟಿ ತಾರಾ ಅಭಿನಯದ ‘ಹೆಬ್ಬೆಟ್ಟು ರಾಮಕ್ಕ’ ಚಿತ್ರ ಅತ್ಯುತ್ತಮ ಕನ್ನಡ ಪ್ರಾದೇಶಿಕ ಚಿತ್ರ  ಎಂದು 65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದ್ದಕ್ಕೆ ನಟಿ ತಾರಾ ಸಂತಸ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ನಟಿ ತಾರಾ ಅವರು,’ ರಾಷ್ಟ್ರ ಪ್ರಶಸ್ತಿ ಸಿಕ್ಕಿದ್ದು ನನಗೆ ಖುಷಿ ತಂದಿದೆ. ನಾನು ನಟಿಸಿದ ಸಾಕಷ್ಟು ಚಿತ್ರಗಳಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಈಗ ಇದು ಕೂಡ ಸೇರ್ಪಡೆ ಆಗಿದೆ. ಹಿಂದೆ ಹಸೀನಾ ಚಿತ್ರಕ್ಕೆ ನನಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ಈಗ 13 ವರ್ಷದ ನಂತರ ನಾನು ಅಭಿನಯಿಸಿದ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಸಿಕ್ಕಿರುವುದು ಖುಷಿಯಾಗಿದೆ ಎಂದು ಹೇಳಿದರು.
ಎನ್.ಆರ್ ನಂಜೇಗೌಡ ನಿರ್ದೇಶನದಲ್ಲಿ ಮೂಡಿಬಂದ ‘ಹೆಬ್ಬೆಟ್ಟು ರಾಮಕ್ಕ’ ಚಿತ್ರ ಮಹಿಳಾ ಪ್ರಧಾನ ಚಿತ್ರವಾಗಿದ್ದು, ಈ ಚಿತ್ರದಲ್ಲಿ ನಟಿ ತಾರಾ ಜೊತೆ ಡೈನಾಮಿಕ್ ಸ್ಟಾರ್ ದೇವರಾಜ್ ಕೂಡ ನಟಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಂಚನೆ ಪ್ರಕರಣದಡಿಯಲ್ಲಿ ದೋಷಿ ಎಂದು ಸಾಬೀತಾದ ಬಾಲಿವುಡ್ ನ ಹಾಸ್ಯನಟ ರಾಜ್ ಪಾಲ್ ಯಾದವ್