Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್ ಹೇಳಿದ್ದೇನು

Bharathi Vishnuvardhan-Siddaramaiah-Aniruddha

Krishnaveni K

ಬೆಂಗಳೂರು , ಬುಧವಾರ, 3 ಸೆಪ್ಟಂಬರ್ 2025 (12:11 IST)
ಬೆಂಗಳೂರು: ಇಂದು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮನವಿಯೊಂದನ್ನು ಸಲ್ಲಿಸಿದ್ದಾರೆ. ಅಷ್ಟಕ್ಕೂ ಅವರು ಸಿಎಂ ಬಳಿ ಏನೆಲ್ಲಾ ಮನವಿ ಮಾಡಿದ್ದಾರೆ? ಇಲ್ಲಿದೆ ನೋಡಿ ವಿವರ.

ಸಾಹಸಸಿಂಹ ಡಾ ವಿಷ್ಣುವರ್ಧನ್ ಸಮಾಧಿಯಿದ್ದ ಸ್ಥಳವನ್ನು ಇತ್ತೀಚೆಗೆ ಅಭಿಮಾನ್ ಸ್ಟುಡಿಯೋ ಮಾಲಿಕರಾದ ಬಾಲಣ್ಣ ಕುಟುಂಬಸ್ಥರು ನೆಲಸಮ ಮಾಡಿದ್ದರು. ಇದರ ಬೆನ್ನಲ್ಲೇ ನಿಯಮ ಉಲ್ಲಂಘನೆ ಹಿನ್ನಲೆಯಲ್ಲಿ ಸರ್ಕಾರ ಈ ಭೂ ಪ್ರದೇಶವನ್ನು ಅರಣ್ಯ ಇಲಾಖೆಗೆ ಒಪ್ಪಿಸಲು ಜಿಲ್ಲಾಧಿಕಾರಿಗಳಿಗೆ ನೋಟಿಸ್ ನೀಡಿತ್ತು.

ಇದರ ಬೆನ್ನಲ್ಲೇ ಈಗ ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್ ಮತ್ತು ಅಳಿಯ, ನಟ ಅನಿರುದ್ಧ ಜತಕರ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಅಭಿಮಾನಿಗಳಿಗಾಗಿ ಸಮಾಧಿ ಸ್ಥಳದಲ್ಲಿ 10 ಗುಂಟೆ ಜಾಗ ಬಿಟ್ಟುಕೊಡಿ ಎಂದು ಮನವಿ ಪತ್ರ ಸಲ್ಲಿಸಿದ್ದಾರೆ.

ಇಂದು ಕಾವೇರಿ ನಿವಾಸದಲ್ಲಿ ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಪತ್ರದಲ್ಲಿ ‘ಮೈಸೂರಿನಲ್ಲಿ ಡಾ ವಿಷ್ಣುವರ್ಧನ್ ರವರ ಸ್ಮಾರಕವನ್ನು ನಿರ್ಮಿಸಿ ಕನ್ನಡಿಗರ ಹೃದಯದಲ್ಲಿ ವಿಷ್ಣುವರ್ಧನ್ ಅವರ ನೆನಪನ್ನು ಶಾಶ್ವತವಾಗಿ ಉಳಿಸಿರುವ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು. ಆದರೆ ಬೆಂಗಳೂರಿನಲ್ಲಿಯೂ ಸ್ಮಾರಕದ ಅಗತ್ಯವಿದೆ ಎಂಬ ಅಭಿಮಾನಿಗಳ ಬೇಡಿಕೆಯಾಗಿದೆ. ಬೆಂಗಳೂರಿನಲ್ಲಿರುವ ಈ ಸ್ಥಳವು ಅಭಿಮಾನಿಗಳಿಗೆ ಭಾವನಾತ್ಮಕ ನೆನಪಿನ ಸ್ಥಳವೂ ಆಗಿದೆ. ಅಭಿಮಾನ್ ಸ್ಟುಡಿಯೋ ಅರಣ್ಯ ಇಲಾಖೆಗೆ ಸೇರಿದ ಜಾಗ ಎಂದು ಸರ್ಕಾರ ಘೋಷಿಸಿದೆ. ಹೀಗಾಗಿ ಅಭಿಮಾನ್ ಸ್ಟುಡಿಯೋ ವ್ಯಾಪ್ತಿಯಲ್ಲಿ 10 ಗುಂಟೆ ಜಾಗವನ್ನು ಮೀಸಲಿಟ್ಟು ಡಾ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರದಿಂದ ಅನುಮತಿ ನೀಡಬೇಕೆಂದು ಕೇಳಿಕೊಳ್ಳುತ್ತೆನೆ’ ಎಂದು ಹೇಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾನ್ವಿ ಸುದೀಪ್ ಬಾಯಲ್ಲಿ ತಪ್ಪಿಯೂ ಕನ್ನಡ ಇಲ್ಲ: ಟ್ರೋಲ್ ಆದ ಕಿಚ್ಚನ ಮಗಳ ಸಂದರ್ಶನ