ಬೆಂಗಳೂರು : ಇತ್ತಿಚೆಗಷ್ಟೇ ಕನ್ನಡ ಸಿನಿಮಾ ನಿರ್ಮಾಪಕ ನವೀನ್ ಜೊತೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಬಹುಭಾಷಾ ನಟಿ ಭಾವನಾ ಮೆನನ್ ಅವರು ತಮ್ಮ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ನೀಡಿದ್ದಾರೆ.
ಪ್ರಜ್ವಲ್ ದೇವರಾಜ್ ಅಭಿನಯದ 30ನೇ ಚಿತ್ರದಲ್ಲಿ ಭಾವನಾ ನಾಯಕಿಯಾಗಿ ಅಭಿನಯಿಸುವುದಕ್ಕೆ ಒಪ್ಪಿಗೆ ನೀಡಿದ್ದಾರೆ. ಈಗಾಗಲೇ ಸಿನಿಮಾದ ಮಹೂರ್ತ ಮಾಡಿರುವ ಚಿತ್ರತಂಡ ಫೆಬ್ರವರಿ ಅಂತ್ಯದಲ್ಲಿ ಚಿತ್ರೀಕರಣ ಶುರು ಮಾಡಲಿದ್ದಾರೆ.
ಪುನೀತ್ ರಾಜ್ ಕುಮಾರ್ ಅಭಿನಯದ ‘ಜಾಕಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರುವ ಭಾವನಾ ಅವರು ಕನ್ನಡದಲ್ಲಿ ಬಚ್ಚನ್, ವಿಷ್ಣುವರ್ಧನ ಮುಂತಾದ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಮದುವೆ ನಂತರ ಸಿನಿಮಾ ಜೀವನದಿಂದ ದೂರ ಉಳಿಯುತ್ತಾರೆ ಎಂದುಕೊಂಡಿದ್ದ ಅಭಿಮಾನಿಗಳಿಗೆ ಭಾವನಾ ಸಿನಿಮಾದಲ್ಲಿ ಮತ್ತೆ ನಟಿಸಲು ಒಪ್ಪಿಗೆ ನೀಡಿದ್ದು ಖುಷಿ ಕೊಟ್ಟಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ