ಬೆಂಗಳೂರು : ಬಿಗ್ ಬಾಸ್ ಸೀಸನ್ 3 ನ ಸ್ಪರ್ಧಿ ಕ್ರಿಕೆಟಿಗ ಅಯ್ಯಪ್ಪ ಅವರು ಸ್ಯಾಂಡಲ್ ವುಡ್ ನ ನಟಿಯೊಬ್ಬರ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಸ್ಯಾಂಡಲ್ ವುಡ್ ನಟಿ ಅನು ಮಾಳೇಟಿರ ಅವರ ಜೊತೆಗೆ ಬೆಂಗಳೂರಿನ ವಸಂತ ನಗರದಲ್ಲಿರುವ ಕೊಡವ ಸಮಾಜದಲ್ಲಿ ಕೊಡವ ಸಂಪ್ರದಾಯದಂತೆ ಅಯ್ಯಪ್ಪ ಅವರ ನಿಶ್ಚಿತಾರ್ಥ ಕಾರ್ಯಕ್ರಮ ನೇರವೇರಿದ್ದು, ಈ ಕಾರ್ಯಕ್ರಮಕ್ಕೆ ಇಬ್ಬರ ಕುಟುಂಬದ ಗುರು-ಹಿರಿಯರು ಭಾಗಿಯಾಗಿದ್ದರು. ಇವರ ಮದುವೆಯು ಮುಂದಿನ ವರ್ಷ ನಡೆಯುವುದಾಗಿ ತಿಳಿದುಬಂದಿದೆ.
ಅನು ಮಾಳೇಟಿ ಅವರು ಕನ್ನಡದ ಕರ್ವ, ಕಥಾವಿಚಿತ್ರ, ಲೈಫ್ ಸೂಪರ್, ಪಾನಿಪೂರಿ ಚಿತ್ರಗಳಲ್ಲಿ ನಟಿಸಿದ್ದಾರೆ. ಸದ್ಯ ಈಗ ಅವರು ಖಾಸಗಿ ವಾಹಿನಿಯ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ