ದರ್ಶನ್ ವಿರುದ್ಧ ಏಕವಚನದ ವಾಗ್ದಾಳಿ ಬಳಿಕ ದೂರು ನೀಡಿದ ಬಿಗ್ ಬಾಸ್ ಜಗದೀಶ್ ದೂರು

Krishnaveni K
ಬುಧವಾರ, 6 ನವೆಂಬರ್ 2024 (15:06 IST)
Photo Credit: X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ನಟ ದರ್ಶನ್ ವಿರುದ್ಧ ಬಿಗ್ ಬಾಸ್ ಖ್ಯಾತಿಯ ಜಗದೀಶ್ ದೂರು ನೀಡಿದ್ದಾರೆ. ಇತ್ತೀಚೆಗಷ್ಟೇ ಅವರು ದರ್ಶನ್ ವಿರುದ್ಧ ಏಕವಚನ ಬಳಸಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು.

ಬಿಗ್ ಬಾಸ್ ನಲ್ಲಿದ್ದಾಗಲೂ ಒಂದಿಲ್ಲೊಂದು ಕಿರಿಕ್ ಗಳಿಂದಲೇ ಸುದ್ದಿಯಾಗಿದ್ದ ಜಗದೀಶ್ ಗೆ ಈಗ ಅಭಿಮಾನಿಗಳ ಸಂಖ್ಯೆಯೂ ಹೆಚ್ಚಿದೆ. ಈ ನಡುವೆ ಅವರು ನಟ ದರ್ಶನ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಇದು ದರ್ಶನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಇದೇ ಕಾರಣಕ್ಕೆ ಕೆಲವು ಅಭಿಮಾನಿಗಳು ಅವರಿಗೆ ಜೀವ ಬೆದರಿಕೆಯನ್ನೂ ಹಾಕಿದ್ದರಂತೆ. ಇದನ್ನೂ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಅವರು ಈಗ ದರ್ಶನ್ ಮತ್ತು ಅವರ ಅಭಿಮಾನಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಅವರು ಕೇಸ್ ದಾಖಲಿಸಿದ್ದಾರೆ.

ದರ್ಶನ್ ವಿರುದ್ಧ ಮಾತಾಡಿದ್ದಕ್ಕೆ ಹಲವಾರು ಮಂದಿ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ಅದರಲ್ಲೂ ದರ್ಶನ್ ಅಭಿಮಾನಿ ರಿಷಿ ಎಂಬಾತ ಕೊಲೆ ಬೆದರಿಕೆ ಹಾಕುತ್ತಿದ್ದಾನೆ. ಇದೀಗ ನನಗೆ ಮತ್ತು ನನ್ನ ಕುಟುಂಬಕ್ಕೆ ಜೀವ ಬೆದರಿಕೆಯಿದೆ. ನಮಗೆ ರಕ್ಷಣೆ ಕೊಡಬೇಕು ಮತ್ತು ನಟ ದರ್ಶನ್ ಹಾಗೂ ಅವರ ಅಭಿಮಾನಿ ರಿಷಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments