ಬಿಗ್ ಬಾಸ್ ನಿಂದ ಹೊರಬಂದ ಮೇಲೂ ಜಗದೀಶ್ ಸದ್ದು ನಿಲ್ಲುತ್ತಿಲ್ಲ: ದಿಡೀರ್ ಪೊಲಿಸ್ ಠಾಣೆ ಮೆಟ್ಟಿಲೇರಿದ ಜಗ್ಗು

Krishnaveni K
ಶುಕ್ರವಾರ, 25 ಅಕ್ಟೋಬರ್ 2024 (11:29 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಎರಡೇ ವಾರ ಮನೆಯೊಳಗಿದ್ದರೂ ಭಾರೀ ಸುದ್ದಿ ಮಾಡಿದ್ದ ಲಾಯರ್ ಜಗದೀಶ್ ಗೆ ಈಗಲೂ ಸದ್ದು ಮಾಡುತ್ತಲೇ ಇದ್ದಾರೆ. ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಬಿಗ್ ಬಾಸ್ ಖ್ಯಾತಿಯ ಜಗದೀಶ್ ಈಗ ತಮ್ಮ ಮನೆ ಮೇಲೆ ಯಾರೋ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ ಎಂದು ಪೊಲೀಸ್ ಕಮಿಷನರ್ ಗೆ ದೂರು ಕೊಡಲು ಹೋಗಿದ್ದಾರೆ. ಇದು ಕಳೆದ ಒಂದೂವರೆ ತಿಂಗಳಿನಲ್ಲಿ ಎರಡನೇ ಬಾರಿ ನಡೆಯುತ್ತಿರುವ ದಾಳಿ ಎಂದು ಅವರು ಆರೋಪಿಸಿದ್ದಾರೆ.

ಒಂದೂವರೆ ತಿಂಗಳ ಹಿಂದೆ ಸುಮಾರು 25 ಜನ ಪುಡಾರಿಗಳು ಮನೆಯ ಹತ್ತಿರ ಬಂದು ದಾಳಿ ಮಾಡಿದ್ದರು. ಆದರೆ ಈಗ ಮತ್ತೆ ಮೂರು ಜನ ಕುಡಿದು ಬಂದು ಮನೆ ಮೇಲೆ ಅಟ್ಯಾಕ್ ಮಾಡಲು ಬಂದರು. ಗುರುವಾರ 3 ಸಾವಿರ ಜನರನ್ನು ಭೇಟಿ ಮಾಡಿದ್ದೆ. ಆಗ ಏನೂ ಸಮಸ್ಯೆಯಾಗಿರಲಿಲ್ಲ. ಈ ಬಗ್ಗೆ ಪೊಲೀಸ್ ಆಯುಕ್ತ ದಯಾನಂದ್ ಭೇಟಿ ಮಾಡಲಿದ್ದೇನೆ ಎಂದಿದ್ದಾರೆ.

ಮನೆಗೆ ಬಂದವನು ಚನ್ನಪಟ್ಟಣದವನಂತೆ. ಸೆಲ್ಫೀ ಬೇಕು, ಹೊರಗೆ ಬರಬೇಕು ಎಂದು ಧಮ್ಕಿ ಹಾಕಿದ್ದಾನೆ. ಅಭಿಮಾನದ ಹೆಸರಲ್ಲಿ ಹೀಗೆ ಮಾಡುವುದು ಎಷ್ಟು ಸರಿ ಎಂದು ಜಗದೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಗ್ ಬಾಸ್ ಗೆ ಹೋಗಿ ಬಂದ ಮೇಲೆ ಜಗದೀಶ್ ಜನಪ್ರಿಯತೆ ಹೆಚ್ಚಿದೆ. ಇದರ ನಡುವೆ ಈಗ ಇಂತಹ ಘಟನೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಮುಂದಿನ ಸುದ್ದಿ
Show comments