ಬೆಂಗಳೂರು: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ 11ನೇ ಆವೃತ್ತಿಯ ಆಟ ಇದೀಗ 90ನೇ ದಿನದತ್ತ ಮುನ್ನುಗ್ಗುತ್ತಿದೆ. ಈ ಮಧ್ಯೆ ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ ಮೂರನೇ ಬಾರಿ ಜೈಲು ಸೇರಿದ್ದಾರೆ.
ದೊಡ್ಮನೆಯಲ್ಲಿ ಎಂದಿನಂತೆ ಉತ್ತಮ ಮತ್ತು ಕಳಪೆ ಚಟುವಟಿಕೆಗಳು ನಡೆದಿವೆ. ಈಗಾಗಲೇ ಎರಡು ಬಾರಿ ಬಿಗ್ ಬಾಸ್ ಮನೆಯ ಜೈಲು ಸೇರಿದ್ದ ಚೈತ್ರಾ ಕುಂದಾಪುರ ಮತ್ತೆ ಕಂಬಿ ಹಿಂದೆ ಹೋಗಿದ್ದಾರೆ.
ಬಹುತೇಕ ಸ್ಪರ್ಧಿಗಳು ಕಳಪೆಗೆ ಚೈತ್ರಾ ಕುಂದಾಪುರ ಹೆಸರನ್ನೇ ತೆಗೆದುಕೊಂಡಿದ್ದಾರೆ. ಹೀಗಾಗಿ ಚೈತ್ರಾ ಕುಂದಾಪುರ ಮತ್ತೆ ಜೈಲು ಸೇರಿದ್ದಾರೆ. ಇನ್ನು ಕಳಪೆ ನೀಡುವ ವೇಳೆ ಎಂದಿನಂತೆ ಮಾತಿನ ಸಮರಗಳು ನಡೆದಿವೆ. ವಿಶೇಷವಾಗಿ ಚೈತ್ರಾ ಕುಂದಾಪುರಗೆ ಹನುಮಂತು ಟಾಂಗ್ ನೀಡಿದ್ದಾರೆ.
ಟಾಸ್ಕ್‌ವೊಂದರಲ್ಲಿ ಚೈತ್ರಾ ಸರಿಯಾಗಿ ಉಸ್ತುವಾರಿ ಮಾಡದೇ ಬೇಕಂತಲೇ ಫೌಲ್ ಕೊಟ್ಟರೂ ಎಂಬ ಕಾರಣಕ್ಕೆ ಮೋಕ್ಷಿತಾ, ಧನರಾಜ್ ಸೇರಿದಂತೆ ಅನೇಕರು ಕಳಪೆ ಪಟ್ಟ ನೀಡಿದರು. ಬಳಿಕ ಕಳಪೆ ಪ್ರದರ್ಶನ ಎಂದ ಹನುಮಂತ ನಡುವೆ ವಾಕ್ಸಮರ ನಡೆದಿದೆ.
ಕಳಪೆ ಕೊಡಲು ನಾನು ಇಲ್ಲಿ ಯಾರನ್ನೂ ಟಾರ್ಗೆಟ್ ಮಾಡಿಲ್ಲ. ನೀನು ನನ್ನ ದೊಡ್ಡಪ್ಪನ ಮಗಳು, ಅತ್ತೆ ಮಗಳು ಅಲ್ಲ ಎಂದು ಡೈಲಾಗ್ ಹೊಡೆದಿದ್ದಾರೆ. ಇನ್ನೂ ಮುಂದಿನ ವಾರಕ್ಕೆ ಯಾರು ನಾಯಕರಾಗುತ್ತಾರೆ ಅನ್ನೋದು ಕೂಡ ರಿವೀಲ್ ಆಗಿದೆ. ಐಶ್ವರ್ಯಾಗೆ ಠಕ್ಕರ್ ಕೊಟ್ಟು ಭವ್ಯಾ ಬಿಗ್ ಬಾಸ್ ಮನೆಗೆ ಕ್ಯಾಪ್ಟನ್ ಆಗಿದ್ದಾರೆ.