ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ಮಂಜು ಪಾವಗಡ

Krishnaveni K
ಶನಿವಾರ, 5 ಅಕ್ಟೋಬರ್ 2024 (10:33 IST)
Photo Credit: X
ಬೆಂಗಳೂರು: ಬಿಗ್ ಬಾಸ್ ಕನ್ನಡ ಖ್ಯಾತಿಯ ನಟ ಮಂಜು ಪಾವಗಡ ಸದ್ದಿಲ್ಲದೇ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ಅವರ ನಿಶ್ಚಿತಾರ್ಥದ ಫೋಟೋ ವೈರಲ್ ಆಗಿದೆ.

ಕಾಮಿಡಿ ಶೋಗಳ ಮೂಲಕ ಚಿರಪರಿಚಿತರಾಗಿದ್ದ ಮಂಜು ಪಾವಗಡ ಬಳಿಕ ಬಿಗ್ ಬಾಸ್ ಕನ್ನಡ ಶೋಗೆ ಸ್ಪರ್ಧಿಯಾಗಿ ಹೋಗಿ ಬಳಿಕ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದರು. ಬಿಗ್ ಬಾಸ್ ನಲ್ಲಿ ಅವರು ಪಡೆದ ಜನಪ್ರಿಯತೆಯಿಂದಾಗಿ ಅವರಿಗೆ ಕೆಲವು ಕಿರುತೆರೆ ಧಾರವಾಹಿಗಳಲ್ಲೂ ನಟನೆಯ ಅವಕಾಶ ಸಿಕ್ಕಿತ್ತು.

ಇತ್ತೀಚೆಗೆ ಮುಕ್ತಾಯವಾದ ಅಂತರಪಟ ಧಾರವಾಹಿಯಲ್ಲಿ ಹೀರೋಯಿನ್ ಅಪ್ಪನಾಗಿ ನಟಿಸಿದ್ದರು. ಹೀರೋಯಿನ್ ಅಪ್ಪನ ಪಾತ್ರ ಮಾಡಿದ್ದ ಮಂಜುಗೆ ಅಷ್ಟೊಂದು ವಯಸ್ಸಾಗಿದೆಯಾ ಎಂದು ಎಲ್ಲರೂ ಅಚ್ಚರಿಪಟ್ಟುಕೊಂಡಿದ್ದರು. ಆದರೆ ಈ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದರು. ನನಗೆ ಅಷ್ಟು ವಯಸ್ಸಾಗಿಲ್ಲ, ಇನ್ನೂ ಮದುವೆಯಾಗಿಲ್ಲ ಎಂದಿದ್ದರು.

ಇದೀಗ ಮಂಜು ಪಾವಗಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆದರೆ ಮಂಜು ಮದುವೆಯಾಗುವ ಹುಡುಗಿ ಬಗ್ಗೆ ಹೆಚ್ಚಿನ ವಿವರ ಲಭ್ಯವಾಗಿಲ್ಲ. ಸಾಂಪ್ರದಾಯಿಕವಾಗಿ ನಿಶ್ಚಿತಾರ್ಥವಾದ ಬಳಿಕ ರಿಸೆಪ್ಷನ್ ಮಾಡಿಕೊಂಡಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅವರ ನಿಶ್ಚಿತಾರ್ಥಕ್ಕೆ ಫ್ಯಾನ್ಸ್ ಶುಭಾಶಯಗಳ ಸುರಿಮಳೆಗೈದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments