Webdunia - Bharat's app for daily news and videos

Install App

BigBoss Season 11: ದೊಡ್ಮನೆಯಿಂದ ಹೊರಬಂದು ಆಸ್ಪತ್ರೆ ಸೇರಿದ ಶೋಭಾ ಶೆಟ್ಟಿ

Sampriya
ಬುಧವಾರ, 4 ಡಿಸೆಂಬರ್ 2024 (18:52 IST)
Photo Courtesy X
ಬಿಗ್ ಬಾಸ್ ಕನ್ನಡ 11ಕ್ಕೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿಕೊಟ್ಟು ಎರಡನೇ ವಾರಕ್ಕೆ ದೊಡ್ಮನೆಯಿಂದ ಹೊರನಡೆದ ಶೋಭಾ ಶೆಟ್ಟಿ ಇದೀಗ ಆಸ್ಪತ್ರೆ ಸೇರಿದ್ದಾರೆ.

ತೆಲುಗು ಬಿಗ್‌ಬಾಸ್‌ನಲ್ಲಿ ಆವೇಶದಿಂದ ಆಟವಾಡಿ ಹವಾ ಸೃಷ್ಟಿಸಿದ್ದ ಶೋಭಾ ಶೆಟ್ಟಿ ಅವರು ಕನ್ನಡದ ಬಿಗ್‌ಬಾಸ್‌ಗೆ ಎಂಟ್ರಿಕೊಟ್ಟು ಮೊದಲ ವಾರದಲ್ಲಿ ಸ್ಪರ್ಧಿಗಳಿಗೆ ತಮ್ಮ ಮಾತಿನಿಂದ ತಿವಿದು,  ಶಾಕ್ ನೀಡಿದ್ದರು.

ಎರಡನೇ ವಾರಕ್ಕೆ ಸೈಲೆಂಟ್ ಆದ ಅವರು ಕಳಪೆ ಹಣೆಪಟ್ಟಿಯೊಂದಿಗೆ ಜೈಲು ಸೇರಿದ್ದರು. ಆದರೆ ವಾರದ ಕೊನೆಯಲ್ಲಿ ನಾಮಿನೇಷನ್‌ನಿಂದ ಸೇವ್ ಆದರೂ, ಇಲ್ಲಿರಲೂ ಸಾಧ್ಯವಿಲ್ಲ, ಆರೋಗ್ಯದ ನೆಪವೊಡ್ಡಿ ಮನೆಯಿಂದ ಹೊರನಡೆದರು. ಹೀಗಾಗಿ ಅವರ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು.

ಮನೆಯಿಂದ ಹೊರಬಂದ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪೋಸ್ಟ್‌ ಅನ್ನು ಹಂಚಿಕೊಂಡಿದ್ದರು. ಇದೀಗ ಆಸ್ಪತ್ರೆ ಸೇರಿರುವ ಬಗ್ಗೆ ಶೋಭಾ ಶೆಟ್ಟಿ ಅವರು ಪೋಸ್ಟ್ ಹಾಕಿದ್ದಾರೆ.

ಕಳೆದ ವಾರ 'ಬಿಗ್ ಬಾಸ್'ನಿಂದ ಎಲಿಮಿನೇಷನ್ ಆದ ಬಳಿಕ ಆಸ್ಪತ್ರೆಗೆ ನಟಿ ದಾಖಲಾಗಿದ್ದಾರೆ. ಉತ್ತಮಗೊಳ್ಳುತ್ತಿದ್ದೇನೆ ನಾನು ಶೀಘ್ರದಲ್ಲೇ ಹಿಂತಿರುಗುತ್ತೇನೆ ನಿಮ್ಮ ಪ್ರೀತಿಗಾಗಿ ತುಂಬಾ ಧನ್ಯವಾದಗಳು ಎಂದು ಶೋಭಾ ಶೆಟ್ಟಿ ಫ್ಯಾನ್ಸ್‌ಗೆ ಸಂದೇಶ ನೀಡಿದ್ದಾರೆ. ಆಸ್ಪತ್ರೆಯ ಬೆಡ್‌ನಿಂದಲೇ ಅಭಿಮಾನಿಗಳ ಪ್ರೀತಿಗೆ ನಟಿ ಪ್ರತಿಕ್ರಿಯೆ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments