Select Your Language

Notifications

webdunia
webdunia
webdunia
webdunia

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಮಂಗಳಾಪುರಂ ಕನ್ನಡ ಸಿನಿಮಾ

Sampriya

ಬೆಂಗಳೂರು , ಶನಿವಾರ, 30 ಆಗಸ್ಟ್ 2025 (16:34 IST)
Photo Credit X
ಬೆಂಗಳೂರು: ಆಪರೇಷನ್ ಅಲಮೇಲಮ್ಮ, ಕವಲುದಾರಿ ಸಿನಿಮಾ ಖ್ಯಾತಿಯ ನಟ ರಿಷಿ ನಾಯಕನಾಗಿ ನಟಿಸುತ್ತಿರುವ ‘ಮಂಗಳಾಪುರಂ’ ಸಿನಿಮಾಗೆ ಅವರಿಗೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಜೋಡಿಯಾಗಿದ್ದಾರೆ. 

ರಿಷಿ ಜೊತೆಗೆ ಪ್ರಮುಖ ಪಾತ್ರದಲ್ಲಿ ಕಾಶಿನಾಥ್ ಅವ ಪುತ್ರ ಅಭಿಮನ್ಯು ಕಾಶಿನಾಥ್ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಟೈಟಲ್ ಮೂಲಕ ಗಮನ ಸೆಳೆದಿದ್ದ ಮಂಗಳಾಪುರಂ ಸಿನಿಮಾ ಇದೀಗ ಅದ್ದೂರಿ ಮುಹೂರ್ತ ಮಾಡಿಕೊಳ್ಳುವ ಮೂಲಕ ಚಿತ್ರೀಕರಣ ಪ್ರಾರಂಭಿಸಿದೆ.

ಸಿನಿಮಾದ ಮುಹೂರ್ತ ಮೂಡುಬಿದಿರೆಯ ಅಲಂಗಾರಿನಲ್ಲಿರುವ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. 
ಮುಹೂರ್ತ ಸಮಾರಂಭದಲ್ಲಿ ಇಡೀ ಸಿನಿಮಾತಂಡದ ಜೊತೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವಾ, ಅಲಂಗಾರು ಈಶ್ವರ ಭಟ್, ಉದ್ಯಮಿ ಶ್ರೀಪತಿ ಭಟ್ ಸೇರಿದಂತೆ ಅನೇಕರು ಹಾಜರಿದ್ದು, ಸಿನಿಮಾತಂಡಕ್ಕೆ ಶುಭಹಾರೈಸಿದರು. ಇದನ್ನೂ ಓದಿ: ದುನಿಯಾ ವಿಜಯ್ ಪುತ್ರಿ ರಿತನ್ಯಾ ಹುಟ್ಟುಹಬ್ಬಕ್ಕೆ ಲ್ಯಾಂಡ್ ಲಾರ್ಡ್ ಫಸ್ಟ್ ಲುಕ್

ಈ ಸಿನಿಮಾಗೆ ರಂಜಿತ್ ರಾಜ್ ಸುವರ್ಣ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಮೊದಲು ತುಳು ಸಿನಿಮಾ ಮಾಡಿದ್ದ ರಂಜಿತ್ ರಾಜ್ ಅವರು ಇದೀಗ ಮಂಗಳಾಪುರಂ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನೂ ವಾರಾಹಿ ಕ್ರಿಯೇಶನ್ ಮೂಲಕ ಈ ಚಿತ್ರವನ್ನು ವಿದ್ವಾನ್ ಪ್ರಸನ್ನ ತಂತ್ರಿ, ರಾಮ್ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ.

ಇನ್ನೂ ವಿಶೇಷ ಎಂದರೆ ಚಿತ್ರಕ್ಕೆ ಗೌತಮಿ ಜಜಾದವ್ ಅವರ ಪತಿ ಅಭಿಷೇಕ್ ಕಾಸರಗೋಡು ಛಾಯಾಗ್ರಹಣವಿದೆ. ಪತ್ನಿಯ ನಟನೆಯನ್ನು ಪತಿಯೇ ಸೆರೆಹಿಡಿಯುತ್ತಿರುವುದು ವಿಶೇಷ. 

Share this Story:

Follow Webdunia kannada

ಮುಂದಿನ ಸುದ್ದಿ

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ